- ಹುಬ್ಬಳ್ಳಿಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪ
ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ
ಅತಿವೃಷ್ಟಿ, ನೆರೆಯಿಂದ ರಾಜ್ಯದ ಜನರು ಸಂಕಷ್ಟದಲ್ಲಿದ್ದಾರೆ. ಆದರೆ, ಬಿಜೆಪಿಯವರು ಸಿಎಂ ಸ್ಥಾನ ಉಳಿಸಿಕೊಳ್ಳುವುದು ಹಾಗೂ ಬದಲಾವಣೆ ಮಾಡುವಲ್ಲಿ ಬ್ಯೂಸಿ ಆಗಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಆರೋಪಿಸಿದರು.
ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಬಾರಿಯದ್ದೇ ನೆರೆ ಹಾನಿ ಪರಿಹಾರ ಇನ್ನೂ ಕೊಟ್ಟಿಲ್ಲ. ಕನಿಷ್ಠ ಈ ಬಾರಿಯಾದರೂ ಪರಿಹಾರ ನೀಡಲಿ. ನೆರೆಹಾನಿ ಸಮೀಕ್ಷೆ ಮಾಡಿ ತಕ್ಷಣವೇ ಪರಿಹಾರ ಘೋಷಣೆ ಮಾಡಬೇಕು. ಇದುವರೆಗೆ 9 ಜನರ ಜೀವ ಹಾನಿಯಾಗಿದೆ. ಸಾವಿರಾರು ಮನೆಗಳು ಕುಸಿದು ಬಿದ್ದಿವೆ, ಬೆಳಹಾನಿಯಾಗಿದೆ. ಕೂಡಲೇ ಕೇಂದ್ರ ಹಾಗೂ ರಾಜ್ಯ ಸರ್ಕಾರ ನೆರವಿಗೆ ಧಾವಿಸಬೇಕು ಎಂದು ಆಗ್ರಹಿಸಿದರು.
ಬಿಎಸವೈ ಅಧಿಕಾರದ ಬಗ್ಗೆ ಜೆಪಿ ನಡ್ಡಾ ಮೆಚ್ಚುಗೆ ವ್ಯಕ್ತಪಡಿಸಿದ ವಿಚಾರವಾಗಿ ಮಾತನಾಡಿದ ಅವರು, ಹೆತ್ತವರಿಗೆ ಹೆಗ್ಗಣ ಮುದ್ದು- ಜೆಪಿ ನಡ್ಡಾ ಅವರಿಂದ ಇದನ್ನು ಬಿಟ್ಟು ಏನನ್ನು ನಿರೀಕ್ಷಿಸಲು ಸಾಧ್ಯ.. ಎಂದು ಪ್ರತಿಕ್ರಿಯಿಸಿದರು.