ಜಮೀನು ನೋಂದಣಿಗೆ ಲಂಚ; ಎಸಿಬಿ ಬಲೆಗೆ ಬಿದ್ದ ಗ್ರಾಮ ಲೆಕ್ಕಾಧಿಕಾರಿ

0
Spread the love

ವಿಜಯಸಾಕ್ಷಿ ಸುದ್ದಿ, ಮುಂಡರಗಿ

Advertisement

ತಾಲೂಕಿನ ಕಲಕೇರಿ ಗ್ರಾಮದ ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ತೊಗರಿಕಟ್ಟಿ ಎಂಬುವವರು ಐದು ಸಾವಿರ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ದಾಳಿ ನಡೆಸಿ ಬಂಧಿಸಿರುವ ಘಟನೆ ಸೋಮವಾರ ನಡೆದಿದೆ.

ಪಟ್ಟಣದ ಕೊಪ್ಪಳ ಕ್ರಾಸ್ ಬಳಿ ಮುಂಡರಗಿ ತಾಲೂಕಿನ ಪೇಠಾಲೂರ ಗ್ರಾಮದ ಸೋಮನಗೌಡ ಕರಿಗೌಡ ಅವರಿಂದ ಲಂಚ ಸ್ವೀಕರಿಸುತ್ತಿರುವಾಗ ಸಿಕ್ಕಿ ಬಿದ್ದಿದ್ದಾರೆ.

ಖರೀದಿಸಿದ ಜಮೀನಿನ ನೋಂದಣಿ ಮಾಡಲು ಮಾಡಲು ಗ್ರಾಮ ಲೆಕ್ಕಾಧಿಕಾರಿ ಜಗದೀಶ್ ಐದು ಸಾವರಿ ರೂ. ಬೇಡಿಕೆ ಇಟ್ಟಿದ್ದ. ಹೀಗಾಗಿ ಹಣ ಸ್ವೀಕಾರ ಮಾಡುವಾಗ ಪೊಲೀಸ್ ಅಧೀಕ್ಷಕ ಬಿ.ಎಸ್.ನ್ಯಾಮಗೌಡ ಅವರ ಮಾರ್ಗದರ್ಶನದಲ್ಲಿ ಎಸಿಬಿ ಡಿವೈಎಸ್‌ಪಿ ವಾಸುದೇವ ರಾಮ್ ಅವರ ನೇತೃತ್ವದಲ್ಲಿ ಇನ್ಸ್‌ಪೆಕ್ಟರ್‌ಗಳಾದ ವೈ.ಎಸ್ ಧರಣನಾಯಕ್, ಆರ್.ಎಫ್.ದೇಸಾಯಿ ಹಾಗೂ ಸಿಬ್ಬಂದಿಗಳು ದಾಳಿ ನಡೆಸಿ ಆರೋಪಿ ಜಗದೀಶ್ ತೊಗರಿಕಟ್ಟಿಯನ್ನು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

LEAVE A REPLY

Please enter your comment!
Please enter your name here