ವಿಜಯಸಾಕ್ಷಿ ಸುದ್ದಿ, ಗದಗ
ವಿಷಪೂರಿತ ಆಹಾರ ಸೇವಿಸಿದ್ದ 14 ವೈದ್ಯಕೀಯ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಜಿಮ್ಸ್ ಕಾಲೇಜಿನ ಶಾರದಾ ಕ್ಯಾಂಟೀನ್‌ನಲ್ಲಿ ಬುಧವಾರ ರಾತ್ರಿ ನಡೆದಿದೆ.
ಈಗಾಗಲೇ ಮೂವರು ಎಂಬಿಬಿಎಸ್ ವಿದ್ಯಾರ್ಥಿಗಳು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇನ್ನು ತೀವ್ರವಾಗಿ ಅಸ್ವಸ್ಥಗೊಂಡಿರುವ 11 ಜನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳು ಜಿಮ್ಸ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬುಧವಾರ ರಾತ್ರಿ ಕಾಲೇಜಿನಲ್ಲಿರುವ ಶಾರದಾ ಕ್ಯಾಂಟಿನ್‌ನಲ್ಲಿ ಅನ್ನ ಸಾಂಬಾರ ಸೇವಿಸಿದ್ದು, ಈ ವೇಳೆ ಅಸ್ವಸ್ಥಗೊಂಡಿದ್ದಾರೆ. ಅಲ್ಲದೇ, ವಿಷಪೂರಿತ ಆಹಾರ ಸೇವಿಸಿದ ಪರಿಣಾಮವಾಗಿ ವಿದ್ಯಾರ್ಥಿಗಳಿಗೆ ವಾಂತಿ ಬೇದಿಯಂತಹ ಸಮಸ್ಯೆಗಳಾಗಿವೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳನ್ನು ಜಿಮ್ಸ್‌ಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇನ್ನು ಘಟನೆ ನಡೆದ ಸ್ಥಳಕ್ಕೆ ಗದಗ ಗ್ರಾಮೀಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.