ವಿಜಯಸಾಕ್ಷಿ ಸುದ್ದಿ, ಗದಗ
ಜಿಲ್ಲೆಯಲ್ಲಿ ಇಂದಿನಿಂದ ಅನ್ ಲಾಕ್ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಸ್ ಗಳು ರಸ್ತೆಗೆ ಇಳಿದಿವೆ. ಕೊರೊನಾ ಹತೋಟಿಗೆ ಬಂದ ಹಿನ್ನೆಲೆಯಲ್ಲಿ ಸರ್ಕಾರ ಗದಗ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಂಜೆ 5ರ ವರೆಗೆ ಅನ್ ಲಾಕ್ ಘೋಷಿಸಿದೆ. ಹೀಗಾಗಿ ವಾಣಿಜ್ಯ ಚಟುವಟಿಕೆಗಳು ಸ್ವಲ್ಪ ಮಟ್ಟಿಗೆ ನಡೆಯುತ್ತಿವೆ. ಹೀಗಾಗಿ ಸಾರಿಗೆ ಸಂಸ್ಥೆಯ ಬಸ್ ಗಳು ರಸ್ತೆಗೆ ಇಳಿದಿವೆ.
ಇಲ್ಲಿಯ ಕೇಂದ್ರೀಯ ಬಸ್ ನಿಲ್ದಾಣಕ್ಕೆ ಬಸ್ ಗಳು ಆಗಮಿಸುತ್ತಿವೆ. ಜಿಲ್ಲೆಯಿಂದ ಹಾವೇರಿ, ಹುಬ್ಬಳ್ಳಿ, ಬಾಗಲಕೋಟೆ, ಮುಂಡರಗಿಗೆ ಬಸ್ ಗಳು ಆರಂಭವಾಗಿವೆ. ಹೀಗಾಗಿ ಪ್ರಯಾಣಿಕರು ಕೂಡ ಬಸ್ ನಿಲ್ದಾಣದತ್ತ ಮುಖ ಮಾಡುತ್ತಿದ್ದಾರೆ.
ಬಸ್ ಆರಂಭವಾದ ಹಿನ್ನೆಲೆಯಲ್ಲಿ ನಗರ ಬಸ್ ಡಿಪೋದಲ್ಲಿ ಬಸ್ ಗೆ ಹಾರ ಹಾಕಿ, ಕಾಯಿ ಒಡೆದು ಪೂಜೆ ಸಲ್ಲಿಸಿ ಸಂಚಾರ ಪ್ರಾರಂಭಿಸಲಾಗಿದೆ. ಬಸ್ ಗೆ ನಮಸ್ಕರಿಸುವ ಮೂಲಕ ಚಾಲಕರು ಬಸ್ ಹತ್ತಿದ್ದಾರೆ. ಜಿಲ್ಲೆಯಲ್ಲಿ ಇಂದಿನಿಂದ 150 ಬಸ್ ಗಳು ಸಂಚಾರ ನಡೆಸುತ್ತಿವೆ.