ವಿಜಯಸಾಕ್ಷಿ ಸುದ್ದಿ, ಗದಗ:
‘ದೇಶದಲ್ಲಿ ಓಮಿಕ್ರಾನ್ ರೂಪಾಂತರ ಪ್ರಕರಣಗಳಲ್ಲಿ ಸ್ಥಿತವಾದ ಏರಿಕೆ ಕಂಡು ಬಂದಿದ್ದು, ರಾಜ್ಯದಲ್ಲಿ ಪ್ರಸರಣದ ಸರಪಳಿ ಮುರಿಯುವ ಸಲುವಾಗಿ ರಾಜ್ಯ ಸರ್ಕಾರದ ಆದೇಶದನ್ವಯ ಇಂದಿನಿಂದ (ಡಿ.28) ಜ.7ರವರೆಗೆ ರಾತ್ರಿ 10 ರಿಂದ ಬೆ.5ರವರೆಗೆ ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಆದೇಶಿಸಿದ್ದಾರೆ.
‘ಜಿಲ್ಲೆಯಾದ್ಯಂತ ಇಂದಿನಿಂದ(ಡಿ.28) ಜ.7ರವರೆಗೆ ರಾತ್ರಿ 10 ರಿಂದ ಬೆ.5ರವರೆಗೆ ರಾತ್ರಿ ಕರ್ಫ್ಯೂ ವಿಧಿಸಲಾಗಿದೆ. ಡಿ.30 ರಿಂದ ಜ.7ರವರೆಗೆ ಜಿಲ್ಲೆಯಲ್ಲಿರುವ ರೆಸ್ಟೋರೆಂಟ್, ಹೋಟೆಲ್, ಕ್ಲಬ್, ಪಬ್‌ಗಳಲ್ಲಿ ಆಸನ ಸಾಮರ್ಥ್ಯದ ಶೇ.50ರಷ್ಟು ಕೋವಿಡ್ ನಿಯಮಗಳನ್ನು ಪಾಲಿಸುವ ಮೂಲಕ ಕಾರ್ಯ ನಿರ್ವಹಿಸಬೇಕು. ಅಲ್ಲದೇ, ಇವುಗಳಲ್ಲಿ ಕೆಲಸ ನಿರ್ವಹಿಸತ್ತಿರುವ ಎಲ್ಲ ಸಿಬ್ಬಂದಿಗಳು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ಹೊಂದಿದ್ದು, ಕೋವಿಡ್‌ನ ಎರಡೂ ಲಸಿಕೆ ಪಡೆದಿರಬೇಕು ಎಂದು ತಿಳಿಸಿದ್ದಾರೆ.
ಅದರಂತೆ, ‘ಡಿ.28ರಿಂದ ಎಲ್ಲ ಸಭೆಗಳು, ಮದುವೆಗಳು ಸೇರಿದಂತೆ ಇನ್ನಿತರ ಕಾರ್ಯಕ್ರಮಗಳಲ್ಲಿ 300 ಜನರಿಗಷ್ಟೇ ಅವಕಾಶ ನೀಡಿದೆ. ಇಂತಹ ಸಮಾರಂಭಗಳಲ್ಲಿ ಕೋವಿಡ್ ಸೂಕ್ತ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಲ್ಲದೇ, ಸಂಘಟಕರು ಕೋವಿಡ್ ನಿಯಮ ಉಲ್ಲಂಘನೆಯಾಗದಂತೆ ನಿಗಾವಹಿಸಬೇಕು. ಒಂದುವೇಳೆ ಕೋವಿಡ್ ನಿಯಮ ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಸುಂದರೇಶಬಾಬು ಅವರು ಕಟ್ಟುನಿಟ್ಟಾಗಿ ಆದೇಶಿಸಿದ್ದಾರೆ.
ಡಿ.28ರಿಂದ ಜಿಲ್ಲೆಯಾದ್ಯಂತ ರಾತ್ರಿ ಕರ್ಪ್ಯೂ ಜಾರಿಯಲ್ಲಿರಲಿದ್ದು, ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಬೇಕು. ಅಲ್ಲದೇ, ಜಿಲ್ಲೆಯ ಜನರು ರಾತ್ರಿ ಕರ್ಪ್ಯೂ ಹಾಗೂ ಕೋವಿಡ್ ನಿಯಮಗಳನ್ನು ತಪ್ಪದೇ ಪಾಲಿಸಬೇಕು
ಶಿವಪ್ರಕಾಶ್ ದೇವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ