ವಿಜಯಸಾಕ್ಷಿ ಸುದ್ದಿ, ಮೈಸೂರು
ಸದ್ಯ ಜಾರಿಯಲ್ಲಿರುವ ಲಾಕ್ ಡೌನ್ ಜೂ. 7ರಂದು ಮುಕ್ತಾಯವಾಗಲಿದ್ದು, ಆನಂತರ ರಾಜ್ಯದಲ್ಲಿ ಲಾಕ್ ಡೌನ್ ಘೋಷಿಸುವುದು ಬೇಡ ಎಂದು ಸಚಿವ ಎಸ್.ಟಿ. ಸೋಮಶೇಖರ್ ಅಭಿಪ್ರಾಯಪಟ್ಟಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಎರಡು ತಿಂಗಳುಗಳಿಂದ ಲಾಕ್ ಡೌನ್ ಘೋಷಣೆಯಾಗಲಿದೆ. ಲಾಕ್ ಡೌನ್ ನಿಂದಾಗಿ ದಿನಂಪ್ರತಿ ಕೂಲಿ ಮಾಡಿ ಜೀವನ ನಡೆಸುತ್ತಿರುವವರ ಬದುಕು ಬೀದಿಗೆ ಬಂದಿದೆ. ಹೀಗಾಗಿ ಈ ಸಂದರ್ಭದಲ್ಲಿ ಮತ್ತೆ ಲಾಕ್ ಡೌನ್ ಘೋಷಿಸಿದರೆ ಅವರಿಗೆ ಕಷ್ಟವಾಗುತ್ತದೆ ಎಂದು ಹೇಳಿದ್ದಾರೆ.
ಸಿಎಂ ಅವರು ನಮ್ಮ ಅಭಿಪ್ರಾಯ ಕೇಳಿದರೆ, ಇದೇ ರೀತಿ ಅಭಿಪ್ರಾಯ ವ್ಯಕ್ತಪಡಿಸುತ್ತೇನೆ. ಈಗಾಗಲೇ ರಾಜ್ಯದಲ್ಲಿ ಕೊರೊನಾ ಪ್ರಕರಣ ಇಳಿಮುಖ ಕಾಣುತ್ತಿದೆ. ಹೀಗಾಗಿ ಲಾಕ್ ಡೌನ್ ಮುಂದುವರೆಸುವುದು ಬೇಡ. ಮನೆ ಮನೆ ಸರ್ವೆ ಕಾರ್ಯದ ಬಗ್ಗೆ ರಿವಿವ್ಯೂ ಮಾಡಲಾಗಿದೆ. ಜಿಲ್ಲೆಯಲ್ಲಿ ಶೇ. 65 ರಿಂದ 70ರಷ್ಟು ಮನೆ ಮನೆ ಸರ್ವೆ ಕಾರ್ಯ ಮುಕ್ತಾಯವಾಗಿದೆ. ಎರಡ್ಮೂರು ದಿನದಲ್ಲಿ ನೂರರಷ್ಟು ಸರ್ವೆ ಕಾರ್ಯ ಮುಕ್ತಾಯವಾಗಲಿದೆ. ಯಾರಿಗೆ ಲಕ್ಷಣಗಳು ಇವೆ ಎಂಬುವುದನ್ನು ನೋಡಲು ಪದೇ ಪದೇ ಸರ್ವೆ ಮಾಡಲು ಸೂಚನೆ ನೀಡಲಾಗಿದೆ.
ಜಿಲ್ಲೆಯಲ್ಲಿ ಔಷಧಿ ಕೊರತೆ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.
ಕಳೆದ ಬಾರಿ ಡಿ.ಎಚ್.ಓ ಅವರನ್ನು ಕೇಳಿದಾಗ ಸಮಸ್ಯೆ ಇಲ್ಲ ಎಂದು ಹೇಳಿದ್ದರು. ಇದೀಗ ಸಮಸ್ಯೆಗಳ ಬಗ್ಗೆ ಶಾಸಕರು ಗಮನಕ್ಕೆ ತಂದಿದ್ದಾರೆ. ಸುಳ್ಳು ಮಾಹಿತಿ ಕೊಡಬೇಡಿ ಎಂದು ಡಿಎಚ್ ಓ ಅವರನ್ನು ತರಾಟೆಗೆ ತೆಗೆದುಕೊಳ್ಳಲಾಗಿದೆ. ಸಮಸ್ಯೆ ಬಗೆ ಹರಿಸುವಂತೆ ಡಿಎಚ್.ಓ ಗೆ ಸೂಚನೆ ಕೊಟ್ಟಿದ್ದೇನೆ ಎಂದು ಹೇಳಿದ್ದಾರೆ.