ವಿಜಯಸಾಕ್ಷಿ ಸುದ್ದಿ, ನರಗುಂದ
ರಾಜ್ಯದಲ್ಲಿ 15000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದ್ದು ಶಿಕ್ಷಕ ಹುದ್ದೆಗಳು ಸಂಪೂರ್ಣ ಭರ್ತಿಯಾಗದಿದ್ದಲ್ಲಿ ಡಿಸೆಂಬರ್ ತಿಂಗಳೊಳಗಾಗಿ ಮತ್ತೊಮ್ಮೆ ಸಿಇಟಿ ನಡೆಸಲಾಗುವದೆಂದು ಮಾನ್ಯ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ.ಸಿ.ನಾಗೇಶ್ ಅವರು ಹೇಳಿದ್ದಾರೆ. ಆದರೆ ಟಿಇಟಿ ನಡೆದ ನಂತರ ಸಿಇಟಿ ನಡೆದರೆ ಉತ್ತಮ ಎಂದು ನರಗುಂದ ತಾಲೂಕ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೊಫೆಸರ್ ಬಿ.ಸಿ.ಹನಮಂತಗೌಡ್ರ ಅಭಿಪ್ರಾಯ ಪಟ್ಟಿದ್ದಾರೆ.
ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಟಿಇಟಿ ನಡೆದ ನಂತರ ಸಿಇಟಿ ನಡೆಸಿದರೆ ಬಹಳಷ್ಟು ಅಭ್ಯರ್ಥಿಗಳಿಗೆ ಅನುಕೂಲವಾಗಲಿದೆ. ಮಾನ್ಯ ಶಿಕ್ಷಣ ಸಚಿವರು ಇದಕ್ಕೆ ಅವಕಾಶ ಕಲ್ಪಿಸಬೇಕೆಂದು ಅವರು ಮನವಿ ಮಾಡಿದ್ದಾರೆ.
Advertisement