
ವಿಜಯಸಾಕ್ಷಿ ಸುದ್ದಿ, ಕೊಪ್ಪಳ
ನಗರದ ಗದಗ ರಸ್ತೆಯ ಸಿಮೆಂಟ್ ಫ್ಯಾಕ್ಟರಿ ಪಕ್ಕದಲ್ಲಿರುವ ಟ್ರಾನ್ಸ್‌ಮೀಟರ್ ಏರಿ ಯುವಕನೊಬ್ಬ ನೇಣು ಬಿಗಿದುಕೊಂಡಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ನೇತಾಡುವ ಸ್ಥಿತಿ ನೋಡಿದರೆ ಮಂಗಳವಾರ ನಸುಕಿನ ಜಾವ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ. ಯುವಕನ ಹೆಸರು ಮತ್ತಿತರ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ. ಕೊಪ್ಪಳ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



