ವಿಜಯಸಾಕ್ಷಿ ಸುದ್ದಿ, ನವಲಗುಂದ:
Advertisement
ಹುಬ್ಬಳ್ಳಿ ಕಡೆಯಿಂದ ಬರುತ್ತಿದ್ದ ಟ್ರ್ಯಾಕ್ಸ್ ವಾಹನ ನಡೆದುಕೊಂಡು ಹೋಗುತ್ತಿದ್ದ ವೃದ್ದೆಗೆ ಡಿಕ್ಕಿ ಹೊಡೆದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ ತಾಲ್ಲೂಕಿನ ಆರೇಕುರಹಟ್ಟಿ ಗ್ರಾಮದಲ್ಲಿ ಭಾನುವಾರ ನಡೆದಿದೆ.
ಆರೇಕುರಹಟ್ಟಿ ಗ್ರಾಮದ ಬಸ್ ನಿಲ್ದಾಣದ ಹತ್ತಿರ ವೃದ್ದೆ ದೇವಕ್ಕ ಗೌಡಪ್ಪ ಕರಿ (70) ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ತಲೆಗೆ ಬಲವಾದ ಪೆಟ್ಟು ಬಿದ್ದ ಕಾರಣ ತೀವ್ರ ರಕ್ತಸ್ರಾವವಾಗಿ ಚಿಕಿತ್ಸೆಗೆಂದು ಹುಬ್ಬಳ್ಳಿಯ ಕಿಮ್ಸಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ದೇವಕ್ಕ ಮೃತಪಟ್ಟಿದ್ದಾಳೆ.
ಘಟನಾ ಸ್ಥಳಕ್ಕೆ ಪಿಎಸ್‍ಐ ಕಲ್ಮೇಶ ಬೆನ್ನೂರ ಹಾಗೂ ಸಿಪಿಐ ಚಂದ್ರಶೇಖರ ಮಠಪತಿ ಭೇಟಿ ನೀಡಿ ಪರೀಶೀಲನೆ ನಡೆಸಿದರು. ಮೃತ ದೇವಕ್ಕಳ ಮಗ ಶಿವಾನಂದ ಕರಿ ದೂರು ನೀಡಿದ್ದು, ನವಲಗುಂದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.