ವಿಜಯಸಾಕ್ಷಿ ಸುದ್ದಿ, ಗದಗ
Advertisement
- ಗದಗ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ ವಿದ್ಯಾರ್ಥಿಗಳು
ಪಿಯುಸಿ ಮಾದರಿಯಲ್ಲೇ ಡಿಪ್ಲೊಮಾ ಪರೀಕ್ಷೆ ರದ್ದುಪಡಿಸಿ ಮುಂದಿನ ಸೆಮಿಸ್ಟರ್ ಗೆ ಪ್ರಮೋಟ್ ಮಾಡಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾಧಿಕಾರಿ ಕಚೇರಿ ಎದುರು ಡಿಪ್ಲೊಮಾ ವಿದ್ಯಾರ್ಥಿಗಳು ಧರಣಿ ನಡೆಸಿದರು.

ಮಹಾಮಾರಿ ಹಿನ್ನೆಲೆ ಡಿಪ್ಲೊಮಾ ವಿದ್ಯಾರ್ಥಿಗಳಿಗೆ ಆನ್ ಲೈನ್, ಆಫ್ ಲೈನ್ ಕ್ಲಾಸ್ ಗಳು ನಡೆದಿಲ್ಲ. ತರಗತಿ ನಡೆಸದೇ ಪರೀಕ್ಷೆ ನಡೆಸೋದು ಸರಿಯಲ್ಲ. ಹೀಗಾಗಿ ಕೂಡಲೇ ಪರೀಕ್ಷೆ ರದ್ದು ಮಾಡಬೇಕು. ಕೆಲ ವಿವಿಗಳ ಮಾದರಿಯಲ್ಲೇ ಡಿಪ್ಲೊಮಾ ವಿದ್ಯಾರ್ಥಿಗಳನ್ನು ಉತ್ತೀರ್ಣ ಮಾಡಿದಲ್ಲಿ ಅನುಕೂಲವಾಗಲಿದೆ ಎಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.