ವಿಜಯಸಾಕ್ಷಿ ಸುದ್ದಿ, ಮುಂಬಯಿ
ಡೆಲ್ಟಾ ಪ್ಲಸ್ ರೂಪಾಂತರ ತಳಿಗೆ ಮಹಾರಾಷ್ಟ್ರದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ಮೊದಲ ಸಾವು ಸಂಭವಿಸಿರುವುದರಿಂದ ಸರ್ಕಾರದಿಂದ ರಾಜ್ಯದಲ್ಲಿ ಮತ್ತಷ್ಟು ಬಿಗಿ ನಿರ್ಬಂಧಗಳನ್ನು ಜಾರಿಗೊಳಿಸಲಾಗಿದೆ.
ಡೆಲ್ಟಾ ಪ್ಲಸ್ ರೂಪಾಂತರ ತಳಿ ಹರಡುವಿಕೆ ಮತ್ತು ಪರಿಣಾಮಗಳ ಬಗ್ಗೆ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ. ಈ ವೇಳೆ ಮಾತನಾಡಿದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ, ಅಗತ್ಯಕ್ಕೆ ಅನುಗುಣವಾಗಿ ಕಠಿಣ ನಿರ್ಬಂಧಗಳನ್ನು ಜಾರಿಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ.
ರತ್ನಾಗಿರಿ ಜಿಲ್ಲೆಯಲ್ಲಿ 80 ವರ್ಷದ ಮಹಿಳೆಯೊಬ್ಬರು ಡೆಲ್ಟಾ ಪ್ಲಸ್ ರೂಪಾಂತರ ತಳಿಯಿಂದಾಗಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವ ರಾಜೇಶ್ ಟೊಪೆ ಹೇಳಿದ್ದಾರೆ. ಡೆಲ್ಟಾ ಪ್ಲಸ್ ಕೋವಿಡ್ ರೂಪಾಂತರಿಯು ಹೆಚ್ಚು ಅಪಾಯಕಾರಿಯಾಗಿರುವುದರಿಂದ ಅದು ಹರಡುವುದನ್ನು ತಡೆಗಟ್ಟಲು ರಾಜ್ಯಾದ್ಯಂತ 3 ನೇ ಹಂತದ ನಿರ್ಬಂಧಗಳನ್ನು ವಿಧಿಸಬೇಕು ಎಂದು ಸೀತಾರಾಮ್ ಕುಂಟೆ ಆದೇಶದಲ್ಲಿ ತಿಳಿಸಿದ್ದಾರೆ.