
ವಿಜಯಸಾಕ್ಷಿ ಸುದ್ದಿ, ಕೊಪ್ಪಳ: ನಿರಾಶ್ರಿತರಿಗೆ ವಸತಿ ಯೋಜನೆಯಡಿ ಮನೆ ಹಂಚಿಕೆ ಕುರಿತು ಕಾರಟಗಿ ತಾಲೂಕಿನ ಜಂಗಮರ ಕಲ್ಗುಡಿ ಗ್ರಾಮ ಪಂಚಾಯತಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಜಿಲ್ಲಾಧ್ಯಕ್ಷ, ಮಾಜಿ ಸಚಿವ ಶಿವರಾಜ ತಂಗಡಗಿ ಬೆಂಬಲಿಗ ದರ್ಪ ತೋರಿದ ಘಟನೆ ಮಂಗಳವಾರ ನಡೆದಿದೆ.
Advertisement
ಮನೆ ಹಂಚಿಕೆಗೆ ಸಂಬಂಧಿಸಿದ ದಾಖಲಾತಿಗಳನ್ನು ಹಿಡಿದಿದ್ದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಮಾತನಾಡುತ್ತಿದ್ದಂತೆ ದಾಖಲಾತಿಗಳನ್ನು ಕಸಿದುಕೊಂಡು ಹೊರ ನಡೆಯುತ್ತಿರುವ ಕಾಂಗ್ರೆಸ್ ಮುಖಂಡ ಹಾಗೂ ತಂಗಡಗಿ ಬೆಂಬಲಿಗ ಪ್ರಸಾದ್ ದರ್ಪ ಮೆರೆದಿರುವ ದೃಶ್ಯಗಳು ವೈರಲ್ ಆಗಿವೆ.