ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಸಿಎಂ ಯಡಿಯೂರಪ್ಪ ಬ್ಯಾಗ್ ಗಳ ಸಮೇತ ದೆಹಲಿಗೆ ಹೋಗಿದ್ದಾರೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆರೋಪ ಮಾಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿನ್ನೆ ಸಿಎಂ ಯಡಿಯೂರಪ್ಪ ತಮ್ಮ ಇಬ್ಬರು ಪುತ್ರರು ಹಾಗೂ ಕೆಲ ಅಧಿಕಾರಿಗಳೊಂದಿಗೆ ದೆಹಲಿಗೆ ತೆರಳಿದ್ದಾರೆ. ಫ್ಲೈಟ್ ನಲ್ಲಿ 6 ದೊಡ್ಡ ದೊಡ್ಡ ಬ್ಯಾಗ್ ಗಳನ್ನು ಹೊತ್ತೊಯ್ದಿದ್ದಾರೆ ಎಂಬ ಮಾಹಿತಿ ಬಂದಿದೆ. ಆ ಬ್ಯಾಗ್ ಗಳಲ್ಲಿ ರಾಜ್ಯದ ಸಮಸ್ಯೆಗಳ ಕುರಿತಾದ ಫೈಲ್ ಗಳಿವೆಯೇ ಅಥವಾ ಬೇರೆ ಏನಿದೆ ಎಂಬುದು ಗೊತ್ತಾಗಿಲ್ಲ. ಹೈಕಮಾಂಡ್ ಗೆ ಉಡುಗೊರೆ ತೆಗೆದುಕೊಂಡು ಹೋಗಿದ್ದಾರಾ? ಅಥವಾ ಬೇರೆ ಏನು ಕೊಡಲು ತೆಗೆದುಕೊಂಡು ಹೋಗಿದ್ದಾರಾ? ಎಂದು ಪ್ರಶ್ನಿಸಿದ್ದಾರೆ.
ನಿನ್ನೆ ದೆಹಲಿಯಲ್ಲಿ ಯಡಿಯೂರಪ್ಪನವರು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿಯಾಗಿದ್ದಾರೆ. ಅವರೊಬ್ಬರೇ ಭೇಟಿ ಮಾಡಿದ್ದಾರಾ ಅಥವಾ 6 ಬ್ಯಾಗ್ ಗಳೊಂದಿಗೆ ಭೇಟಿ ಮಾಡಿದ್ದಾರಾ? ಈ ಬಗ್ಗೆ ಸಿಎಂ ಸ್ಪಷ್ಟಪಡಿಸಬೇಕು ಎಂದು ಹೇಳಿದ್ದಾರೆ.