ತುಮಕೂರು: ಜಿಲ್ಲೆಯಲ್ಲಿ H5N1 ಹಕ್ಕಿಜ್ವರ ಆತಂಕ ತೀವ್ರಗೊಂಡಿದೆ. 44 ನವಿಲುಗಳ ಸಾವಿನ ನಂತರ ಈಗ ಕೋಳಿಗಳ ಸಾವು ವರದಿಯಾಗಿದ್ದು ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ.
ಬೊಮ್ಮನಹಳ್ಳಿ ಗ್ರಾಮದ ಕೋಳಿ ಫಾರಂನಲ್ಲಿ ಒಂದೇ ವೇಳೆ ಸುಮಾರು 30 ಕೋಳಿಗಳು ಸಾವನ್ನಪ್ಪಿದ್ದು, ಹಕ್ಕಿಜ್ವರ ಕೋಳಿಗಳಿಗೂ ತಗುಲಿದೆಯೇ ಎಂಬ ಅನುಮಾನ ಮೂಡಿದೆ. ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ. ಏಪ್ರಿಲ್ 16ರಿಂದ ಆರಂಭವಾದ ನವಿಲುಗಳ ಸಾವು, ಆರಂಭದಲ್ಲಿ ಬಿಸಿಲಿನ ಪರಿಣಾಮ ಎಂದು ಭಾವಿಸಲಾಗಿತ್ತು. ಆದರೆ ಎಫ್‌ಎಸ್‌ಎಲ್ ವರದಿ ಹಕ್ಕಿಜ್ವರವನ್ನೇ ದೃಢಪಡಿಸಿತು.
ಇದೀಗ ಜಿಲ್ಲಾಡಳಿತ ಹೈ ಅಲರ್ಟ್ ಘೋಷಿಸಿದ್ದು, ಕಲ್ಲಳ್ಳಿ, ಕೋಡಿಹಳ್ಳಿ, ಹುಣ್ಣೆನಹಳ್ಳಿ, ಬೊಮ್ಮನಹಳ್ಳಿ, ಬೈರಸಂದ್ರ ಗ್ರಾಮಗಳನ್ನು ಕಂಟೋನ್ಮೆಂಟ್ ಜೋನ್ ಆಗಿ ಘೋಷಿಸಲಾಗಿದೆ. ಚಿಕನ್ ಅಂಗಡಿಗಳಿಗೆ ತಾತ್ಕಾಲಿಕ ಬೀಗ ಹಾಕಲಾಗಿದ್ದು, ಜನರಿಗೆ ಎಚ್ಚರಿಕೆ ನೀಡಲಾಗಿದೆ. ಯಾವುದೇ ಸಾವು ಕಂಡುಬಂದರೆ ತಕ್ಷಣ ಅಧಿಕಾರಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಲಾಗಿದೆ.
ಒಟ್ಟಿನಲ್ಲಿ, ತುಮಕೂರಿನಲ್ಲಿ ಹಕ್ಕಿಜ್ವರ ಪರಿಸ್ಥಿತಿ ನಿಯಂತ್ರಣದಲ್ಲಿರಿಸಲು ಅಧಿಕಾರಿಗಳು ಕಠಿಣ ಕ್ರಮ ಕೈಗೊಂಡಿದ್ದು, ಜನರು ಮುಂಜಾಗ್ರತೆ ವಹಿಸುವುದು ಅತ್ಯವಶ್ಯಕ.

