ವಿಜಯಸಾಕ್ಷಿ ಸುದ್ದಿ, ಮೈಸೂರು
ರಾಜ್ಯದಲ್ಲಿ ರೈತರ ಹೋರಾಟಕ್ಕೆ ಮತ್ತೆ ಜೀವ ಬಂದಂತಾಗಿದೆ. ಮೇ. 26ರಂದು ರಾಜ್ಯಾದ್ಯಂತ ಕರಾಳ ದಿನಾಚರಣೆಗೆ ಕರೆ ನೀಡಲಾಗಿದೆ. ಈ ಕುರಿತು ಜಿಲ್ಲೆಯಲ್ಲಿ ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ರೈತರಿಗೆ ಕರೆ ನೀಡಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಕರಾಳ ದಿನಾಚರಣೆ ಆಚರಿಸಲು ನಿರ್ಧರಿಸಲಾಗಿದೆ.
ಕರಾಳ ದಿನಾಚರಣೆಯ ಹಿನ್ನೆಲೆಯಲ್ಲಿ ಮೇ. 26ರಂದು ಪ್ರತಿಯೊಬ್ಬರ ರೈತರ ಮನೆಯ ಮೇಲೆ ಕಪ್ಪು ಬಾವುಟ ಹಾರಿಸಬೇಕು. ಅಲ್ಲದೇ, ರೈತರು ಕಪ್ಪು ಬಣ್ಣದ ಮಾಸ್ಕ್ ಧರಿಸಿ, ಕೈಗೆ ಕಪ್ಪು ಪಟ್ಟಿ ಧರಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಗುತ್ತದೆ. ಅಲ್ಲದೇ, ಪ್ರತಿಕೃತಿ ದಹನ ಮಾಡಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಆಡಳಿತಕ್ಕೆ ಬಂದು 7 ವರ್ಷಗಳೇ ಕಳೆದಿವೆ. ಆದರೆ, ಇಂತಹ ಕೆಟ್ಟ ಹಾಗೂ ದುಷ್ಟ ಸರ್ಕಾರವನ್ನೇ ಇಲ್ಲಿಯವರೆಗೆ ರೈತ ಸಂಕುಲ ಕಂಡಿಲ್ಲ. ಈ ಸರ್ಕಾರ ತೊಲಗಿಸುವವರೆಗೆ ನಮ್ಮ ಹೋರಾಟ ನಡೆಯಲಿದೆ ಎಂದು ಅವರು ಕಿಡಿಕಾರಿದ್ದಾರೆ.