ವಿಜಯಸಾಕ್ಷಿ ಸುದ್ದಿ, ಗದಗ
ಮೇ 14 ಶುಕ್ರವಾರವೂ ಸೋಂಕಿನ ಆರ್ಭಟ ಮುಂದುವರೆದಿದೆ. ಸತತವಾಗಿ ನಾಲ್ಕು ನೂರರ ಗಡಿ ದಾಟಿ ಮುನ್ನುಗ್ಗುತ್ತಿದೆ.
ಇವತ್ತಿನ ವರದಿಯಂತೆ ಮತ್ತೆ ನಾಲ್ವರು ಸೋಂಕಿಗೆ ಬಲಿಯಾಗಿದ್ದಾರೆ.
ಇಂದಿನ 447 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 16900 ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -203, ಮುಂಡರಗಿ-94, ನರಗುಂದ-26, ರೋಣ-81, ಶಿರಹಟ್ಟಿ-37 ಹೊರಜಿಲ್ಲೆಯ-06 ಸೇರಿದಂತೆ 447 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 175 ಕ್ಕೇರಿದೆ.
ಗದಗ ಶಹರದ ನಿವಾಸಿ 38 ವರ್ಷದ ಮಹಿಳೆ ಮೇ 09 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇವರಿಗೆ ಕೋವಿಡ್ ದೃಢಪಟ್ಟಿತ್ತು, ಮೇ 10 ರಂದು ಮೃತಪಟ್ಟಿರುತ್ತಾರೆ.
ಗದಗನ 57 ವರ್ಷದ ಮಹಿಳೆ ಮೇ 11 ರಂದು ಜಿಮ್ಸ್ ಗೆ ದಾಖಲಾಗಿದ್ದು, ಕೋವಿಡ್ ದೃಢಪಟ್ಟಿತ್ತು, ಮೇ 12 ರಂದು ಜಿಮ್ಸ್ ನಲ್ಲಿ ಮೃತಪಟ್ಟಿದ್ದಾರೆ.
68 ವರ್ಷದ ಮಹಿಳೆ ಮೇ 5 ರಂದು ಜಿಮ್ಸ್ ಗೆ ದಾಖಲಾಗಿದ್ದರು. ಮೇ 12 ರಂದು ಮೃತಪಟ್ಟಿದ್ದಾರೆ.
ಗಜೇಂದ್ರಗಡ ಪಟ್ಟಣದ 68 ವರ್ಷದ ಮಹಿಳೆ ಮೇ,08 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 13 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು 291 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 14496 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 2229 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 193 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.