ಬೆಂಗಳೂರು: ಪಾರಿವಾಳ ಕದ್ದಿದ್ದಾನೆ ಎಂದು ಆರೋಪಿಸಿ ಬಾಲಕನೊಬ್ಬನ ಮೇಲೆ ಮಾರಕಾಸ್ತ್ರದಿಂದ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಶ್ರೀನಿವಾಸ ನಗರದಲ್ಲಿ ನಡೆದಿದೆ.
ಶಿವು ಅಲಿಯಾಸ್ ಬಸವ ಎಂಬಾತ ಪಾರಿವಾಳ ಸಾಕಾಣಿಕೆ ಮಾಡುತ್ತಿದ್ದ ಎನ್ನಲಾಗಿದೆ. ಇದೇ ಪ್ರದೇಶದ ಬಾಲಕನೊಬ್ಬ ಪಾರಿವಾಳ ಕದಿಯಲು ಬಂದಿದ್ದಾನೆ ಎಂದು ಆರೋಪಿಸಿ, ಆತನನ್ನು ಕಟ್ಟಿ ಹಾಕಿ ಶಿವು ಹಲ್ಲೆ ನಡೆಸಿದ್ದಾನೆ ಎನ್ನಲಾಗಿದೆ.
ಹಲ್ಲೆಯಿಂದ ಬಾಲಕ ಗಾಯಗೊಂಡಿದ್ದು, ಘಟನೆ ಬಳಿಕ ಆರೋಪಿ ಶಿವು ಸ್ಥಳದಿಂದ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದಾರೆ.



