ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಿ: ಅಬ್ದುಲ್ ರಜಾಕ್ ನದಾಫ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಕೊಪ್ಪಳ: ಕರ್ನಾಟಕದಲ್ಲಿ ಮುಸ್ಲಿಂ ಜನಸಂಖ್ಯೆಯಲ್ಲಿ ಬರುವ ಸುಮಾರು ಅರ್ಧದಷ್ಟು ಪಿಂಜಾರ, ನದಾಫ ಇರುವ ಸಮುದಾಯಕ್ಕೆ ಆಂಧ್ರದಲ್ಲಿ ಈಚೆಗೆ ಮಾಡಿರುವಂತೆ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಕರ್ನಾಟಕ ಪಿಂಜಾರ್/ನದಾಫ/ಮನ್ಸೂರಿ ಸಂಘಗಳ ಮಹಾಮಂಡಳದ ರಾಜ್ಯಾಧ್ಯಕ್ಷ ಅಬ್ದುಲ್‌ರಜಾಕ್ ನದಾಫ ಆಗ್ರಹಿಸಿದರು.

Advertisement

ಕೊಪ್ಪಳದ ಮೀಡಿಯಾ ಕ್ಲಬ್‌ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಮುಸ್ಲಿಂ ಸಮುದಾಯದಲ್ಲಿ ಅರ್ಧದಷ್ಟು ಜನಸಂಖ್ಯೆ ಪಿಂಜಾರ ನದಾಫ, ಮನ್ಸೂರಿ, ದುದೇಕುಲಾ ಸಮಯದಾಯವಿದ್ದು, ಈವರೆಗೆ ಶಿಕ್ಷಣ, ಉದ್ಯೋಗ ಸೇರಿದಂತೆ ಇತರ ಸೌಲಭ್ಯಗಳಿಂದ ವಂಚಿತವಾಗಿದೆ ಎಂದು ದೂರಿದರು.

ಅಲೆಮಾರಿ ಎಂದು ಗುರುತಿಸಿರುವ ಈ ಸಮುದಾಯದ ಜನರಿಗೆ ಸದ್ಯ ಪ್ರವರ್ಗ 1ಕ್ಕೆ ಮೀಸಲಾತಿ ಸೌಲಭ್ಯಗಳು ಎಲ್ಲ ಜಿಲ್ಲೆಯಲ್ಲಿ ಸಿಗುತ್ತಿಲ್ಲ. 2009-10ರಲ್ಲಿ ಡಾ.ಸಿ.ಎಸ್.ದ್ವಾರಕನಾಥ ಆಯೋಗವು ಸರಕಾರಕ್ಕೆ ವರದಿ ಸಲ್ಲಿಸಿದೆ. ವರದಿಯಲ್ಲಿ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂಬ ಅಂಶ ಇದೆ. ವರದಿಯನ್ನಾಧರಿಸಿ ಈಗಾಗಲೇ ವಿಶ್ವಕರ್ಮ, ಲಂಬಾಣಿ, ಭೋವಿ, ಉಪ್ಪಾರ ಅಭಿವೃದ್ಧಿ ನಿಗಮಗಳನ್ನು ಸ್ಥಾಪಿಸಲಾಗಿದೆ. ಆದರೆ ಪಿಂಜಾರ ಅಭಿವೃದ್ಧಿ ನಿಗಮ‌ ಸ್ಥಾಪನೆಗೆ ಮುಂದಾಗದಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮುಂಬರುವ ದಿನಗಳಲ್ಲಿ ಪಿಂಜಾರ ಅಭಿವೃದ್ಧಿ ನಿಗಮ ಸ್ಥಾಪಿಸದಿದ್ದರೆ ಮುಖ್ಯಮಂತ್ರಿಗಳಿಗೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಸಿದರು.

ಸುದ್ದಿಗೋಷ್ಠಿಯಲ್ಲಿ ಹುಸೇನ್‌ಸಾಬ್ ನದಾಫ, ಸನ್ನೀಕ್ ಕುರಗೋಡ ಇದ್ದರು.


Spread the love

LEAVE A REPLY

Please enter your comment!
Please enter your name here