ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಗೊಳಿಸಿರುವ ಸರ್ಕಾರ, ಎಸ್ಸೆಸ್ಸೆಲ್ಸಿ ಪರೀಕ್ಷೆಗಳನ್ನು ನಡೆಸಲು ಮುಂದಾಗಿದೆ. ಈ ಕುರಿತು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಹೇಳಿದ್ದಾರೆ.
ಈ ವರ್ಷ ರಾಜ್ಯದ್ಲಿ 8.75 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ ಇಲ್ಲದ ಕಾರಣ ಅವರ ಕಲಿಕಾ ಮಟ್ಟ ನಿರ್ಧಾರವಾಗುವುದು ತುಂಬಾ ಕಷ್ಟವಾಗುತ್ತದೆ. ಕಳೆದ ವರ್ಷ 9 ನೇ ತರಗತಿ ಪರೀಕ್ಷೆ ನಡೆದಿಲ್ಲ. ಸಿಬಿಎಸ್ ಇ ಪಠ್ಯದಲ್ಲಿ ಮೂರು ತಿಂಗೊಳಿಗೊಮ್ಮೆ ವಿದ್ಯಾರ್ಥಿಗಳ ಇವ್ಯುಲೇಶನ್ ನಡೆಯುತ್ತದೆ. ಆದರೆ, ನಮ್ಮಲ್ಲಿ ಈ ಪದ್ಧತಿ ಇಲ್ಲ. ಹೀಗಾಗಿ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿವೆ ಎಂದು ಹೇಳಿದ್ದಾರೆ.
ಈ ಬಾರಿ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಎರಡು ಪರೀಕ್ಷೆ ನಡೆಸಲು ನಿರ್ಧಾರ ಮಾಡಲಾಗಿದೆ. ಸಮಾಜ ವಿಜ್ಞಾನ, ಗಣಿತ, ವಿಜ್ಞಾನ ಈ ಮೂರು ವಿಷಯ ಸೇರಿ ಒಂದು ಪ್ರಶ್ನೆ ಪತ್ರಿಕೆ ಇರುತ್ತದೆ. ಪ್ರಶ್ನೆಗಳು ಸರಳವಾಗಿ, ನೇರವಾಗಿರುತ್ತವೆ. ಆಯ್ಕೆ ಪ್ರಶ್ನೆಗಳು ಇರುತ್ತವೆ ಎಂದು ಹೇಳಿದ್ದಾರೆ.
ಈ ಬಾರಿ 6 ಸಾವಿರ ಪರೀಕ್ಷಾ ಕೇಂದ್ರಗಳಿವೆ. ಕಳೆದ ವರ್ಷ ಮೂರು ಸಾವಿರ ಮಾತ್ರ ಇದ್ದವು. ಒಂದು ಡೆಸ್ಕ್ ನಲ್ಲಿ ಒಬ್ಬ ವಿದ್ಯಾರ್ಥಿಯನ್ನು ಕೂರಿಸಲಾಗುತ್ತದ ಎಂದು ಹೇಳಿದ್ದಾರೆ.