ಪೆಹಲ್ಗಾಮ್ ದಾಳಿ ಬಳಿಕ ಪ್ರಧಾನಿ ಮೋದಿ ಈ ವಾರ ಕಾಶ್ಮೀರಕ್ಕೆ ಭೇಟಿ ಕೊಡ್ತಾರಂತೆ!?

0
Spread the love

ನವದೆಹಲಿ: ಇತ್ತೀಚೆಗೆ ನಡೆದ ಪೆಹಲ್ಗಾಮ್ ದಾಳಿ ಬಳಿಕ ಪ್ರಧಾನಿ ಮೋದಿ ಅವರ ಮೊದಲ ಬಾರಿಗೆ ಈ ವಾರ ಕಾಶ್ಮೀರಕ್ಕೆ ಭೇಟಿ ಕೊಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.

Advertisement

ಕಾಶ್ಮೀರ ಕಣಿವೆಯನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಮೊದಲ ರೈಲು ಸಂಪರ್ಕವನ್ನು ಈ ವಾರಾಂತ್ಯದಲ್ಲಿ ಉದ್ಘಾಟಿಸುವ ಸಾಧ್ಯತೆ ಇದೆ. ಈ ಮಹತ್ವದ ಕಾರ್ಯಕ್ರಮಕ್ಕಾಗಿ ರೈಲ್ವೆ ಅಧಿಕಾರಿಗಳು ಅಂತಿಮ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಾರೆ.

ಜಮ್ಮು ವಿಭಾಗದ ಕತ್ರಾ ಪಟ್ಟಣದಿಂದ ಕಾಶ್ಮೀರ ಕಣಿವೆಯ ಬಾರಾಮುಲ್ಲಾದವರೆಗಿನ ವಂದೇ ಭಾರತ್ ರೈಲು ಸೇವೆಗಳಿಗೆ ಹಸಿರು ನಿಶಾನೆ ತೋರಲಿದ್ದಾರೆ. ಆರಂಭದಲ್ಲಿ ಏಪ್ರಿಲ್ 19ರಂದು ನಿಗದಿಯಾಗಿದ್ದ ಉದ್ಘಾಟನೆಯನ್ನು ಪ್ರತಿಕೂಲ ಹವಾಮಾನದಿಂದಾಗಿ ಮುಂದೂಡಲಾಗಿತ್ತು.ಇದೀಗ ಈ ವಾರ ಪ್ರಧಾನಿ ಮೋದಿ ಕಾಶ್ಮೀರಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ವರದಿ ಆಗಿದೆ.


Spread the love

LEAVE A REPLY

Please enter your comment!
Please enter your name here