ವಿಜಯಸಾಕ್ಷಿ ಸುದ್ದಿ,ಗದಗ
ರಾಜ್ಯ ಸಾರಿಗೆ ಸಂಸ್ಥೆಯ ನೌಕರರು ಬೇಡಿಕೆ ಈಡೇರಿಸುವಂತೆ ಬಸ್ ಬಂದ್ ಮಾಡಿ ಮುಷ್ಕರ ನಡೆಸುತ್ತಿರುವ ಹಿನ್ನೆಲೆಯಲ್ಲಿ
ಗದಗ ಜಿಲ್ಲಾಕೇಂದ್ರದಿಂದ ಜಿಲ್ಲೆಯ ವಿವಿಧ ತಾಲೂಕುಗಳಿಗೆ ಪ್ರಯಾಣಿಕರು ತೆರಳಲು ಮಿನಿ ಬಸ್’ಗಳ ವ್ಯವಸ್ಥೆ ಕಲ್ಪಿಸಲು ಸಾರಿಗೆ ಸಂಸ್ಥೆಯ ಅಧಿಕಾರಿಗಳು ಮುಂದಾಗಿದ್ದಾರೆ.
ಸರ್ಕಾರಿ ಬಸ್ ದರದಲ್ಲೇ ಖಾಸಗಿ ಬಸ್’ಗಳ ಸೇವೆ ಒದಗಿಸಲು ಸಂಸ್ಥೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಸಾರಿಗೆ ಇಲಾಖೆ ಇನ್ಸ್‌ಪೆಕ್ಟರ್ ಬಾಲಚಂದ್ರ ತೊದಲಬಾಗಿ ಅವರು ಮಿನಿ ಬಸ್’ಗಳ ಪರಿಶೀಲನೆ ನಡೆಸಿದರು. ಅಲ್ಲದೇ, ಈಗಾಗಲೇ ಜಿಲ್ಲೆಯಾದ್ಯಂತ ಖಾಸಗಿ ಬಸ್’ಗಳು ಸಂಚಾರ ಆರಂಭಿಸಿವೆ.

ಬಸ್’ಗಳಿಲ್ಲದೇ ಪ್ರಯಾಣಿಕರು ಪರದಾಟ ನಡೆಸುತ್ತಿರುವ ಹಿನ್ನೆಲೆಯಲ್ಲಿ ಪ್ರಯಾಣಿಕರಿಗೆ ಅನುಕೂಲವಾಗಲೆಂದು ಆರ್ ಟಿಒ ಅಧಿಕಾರಿಗಳ ನೇತೃತ್ವದಲ್ಲಿ ಖಾಸಗಿ ಶಾಲೆ ಬಸ್ ಸೇರಿದಂತೆ ಒಟ್ಟು 150 ಖಾಸಗಿ ಬಸ್’ಗಳ ಓಡಿಸಲು ತೀರ್ಮಾನ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.