ವಿಜಯಸಾಕ್ಷಿ ಸುದ್ದಿ, ಬೆಳಗಾವಿ
Advertisement
ಬೆಳಗಾವಿ ಜಿಲ್ಲೆಯ ಪ್ರವಾಹ ಪರಿಸ್ಥಿತಿ ಬಗ್ಗೆ ಜಿಲ್ಲೆ ಅಧಿಕಾರಿಂದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಮಾಹಿತಿ ಪಡೆದರು. ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಮಂಗಳವಾರ ಬೆಳಗಾವಿಯ ಪ್ರವಾಸಿ ಮಂದಿರದಲ್ಲಿ ಜಿಲ್ಲೆಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದರು.

ಜಿಲ್ಲಾಡಳಿತ ಕೈಗೊಂಡ ಪ್ರವಾಹ
ಪರಿಹಾರ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ್, ಎಸ್‍ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ಪಂಚಾಯಿತಿ ಸಿಇಒ ದರ್ಶನ್ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್, ಚಿಕ್ಕೋಡಿ ಶಾಸಕ ಗಣೇಶ್ ಹುಕ್ಕೇರಿ, ಮಾಜಿ ಸಚಿವರಾದ ವೀರಕುಮಾರ್ ಪಾಟೀಲ್, ಎ.ಬಿ. ಪಾಟೀಲ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ವಿನಯ ನಾವಲಗಟ್ಟಿ ಸೇರಿ ಹಲವು ನಾಯಕರು ಉಪಸ್ಥಿತರಿದ್ದರು.