
ವಿಜಯಸಾಕ್ಷಿ ಸುದ್ದಿ, ಗದಗ: ಜಿಲ್ಲೆಯ ರೋಣ ಪಟ್ಟಣ ಮೂಲದ ಬಸಲಿಂಗಪ್ಪ ಮುಶಿಗೇರಿ(67) ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ನಸೀಬಿ ಗ್ರಾಮದಲ್ಲಿ ಬುಧವಾರ ತಡರಾತ್ರಿ ನಿಧನರಾದರು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಹೃದಯಾಘಾತದಿಂದ ಕಣ್ಮುಚ್ಚಿದರು. ಮೃತರು ಪತ್ನಿ, ಪುತ್ರ, ಇಬ್ಬರು ಪುತ್ರಿಯರು, ಮೊಮ್ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಗುರುವಾರ ಮಧ್ಯಾಹ್ನ 1 ಗಂಟೆಗೆ ನಸೀಬಿ ಗ್ರಾಮದಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.
Advertisement