ವಿಜಯಸಾಕ್ಷಿ ಸುದ್ದಿ, ನವದೆಹಲಿ
Advertisement
ಬಾಂಗ್ಲಾ ರಾಜಧಾನಿ ಢಾಕಾದ ಜನನಿ ಬಿಡ ಪ್ರದೇಶದಲ್ಲಿ ಪ್ರಬಲ ಸ್ಫೋಟ ಸಂಭವಿಸಿದ್ದು 7 ಜನ ಸಾವನ್ನಪ್ಪಿ, 400ಕ್ಕೂ ಅಧಿಕ ಜನ ಗಾಯಗೊಂಡಿರುವ ಘಟನೆ ನಡೆದಿದೆ.
ಗ್ಯಾಸ್ ಸಿಲಿಂಡರ್ ಇಲ್ಲವೇ ಗ್ಯಾಸ್ ಲೈನ್ ಸ್ಫೋಟಿಸಿ ಈ ದುರಂತ ಸಂಭವಿಸಿರಬಹುದು ಎಂದು ಶಂಕಿಸಿರುವ ಪೊಲೀಸರು ಘಟನೆ ಹಿಂದೆ ಯಾವುದೇ ಉಗ್ರ ಸಂಘಟನೆಯ ಕೈವಾಡವಿಲ್ಲ ಎಂದು ಹೇಳಿದ್ದಾರೆ.
ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು 12ಕ್ಕೂ ಹೆಚ್ಚು ಕಟ್ಟಡಗಳಿಗೆ ಹಾನಿಯಾಗಿದೆ. ಏಳು ಕಟ್ಟಡಗಳು ಹಾಗೂ ಎರಡು ಬಸ್ ಗಳು ಸಂಪೂರ್ಣವಾಗಿ ಹಾನಿಯಾಗಿವೆ. ಈ ಘಟನೆಯಲ್ಲಿ 7 ಜನ ಸಾವನ್ನಪ್ಪಿದ್ದು, 400ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಸುಮಾರು 50 ಜನರ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ.
ಸ್ಫೋಟದ ತೀವ್ರತೆಗೆ ಕಟ್ಟಡಗಳಿಗೆ ಅಳವಡಿಸಲಾಗಿದ್ದ ಗಾಜಿನ ಚೂರುಗಳು ಗಾಳಿಯಲ್ಲಿ ಚದುರಿ ಹೋಗಿದ್ದರಿಂದಾಗಿ ಹೆಚ್ಚಿನ ಜನರಿಗೆ ಹಾನಿಯಾಗಿದೆ ಎನ್ನಲಾಗಿದೆ.