ವಿಜಯಸಾಕ್ಷಿ ಸುದ್ದಿ, ಬೀಜಿಂಗ್
Advertisement
ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯೊಂದರಲ್ಲಿ ಇಂದು ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದ್ದು, 18 ಜನ ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. 16 ಜನ ಗಾಯಗೊಂಡಿರುವ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ. ಮೃತಪಟ್ಟವರಲ್ಲಿ ಹೆಚ್ಚಿನವರು 7 ರಿಂದ 16 ವರ್ಷದೊಳಗಿನವರಾಗಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ. ಘಟನೆ ನಡೆದ ಸ್ಥಳಕ್ಕೆ ಅಗ್ನಿ ಶಾಮಕದ ಳದ ಸಿಬ್ಬಂದಿ ಭೇಟಿ ನೀಡಿ ನಂದಿಸುವ ಕಾರ್ಯ ಮಾಡುತ್ತಿದ್ದಾರೆ. ಬೆಂಕಿ ಕಾಣಿಸಿಕೊಂಡ ಸಂದರ್ಭದಲ್ಲಿ ಶಾಲೆಯ ಆವರಣದಲ್ಲಿ 34 ವಿದ್ಯಾರ್ಥಿಗಳು ಇದ್ದರು ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ. ಸದ್ಯ ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.