ವಿಜಯಸಾಕ್ಷಿ ಸುದ್ದಿ, ದಾವಣಗೆರೆ
Advertisement
ಜಿಲ್ಲೆಯಲ್ಲಿ ಡೆಂಘಿ ಜ್ವರ ಜನರನ್ನು ಕೆಂಗೆಡಿಸಿದ್ದು, 120ಕ್ಕೂ ಹೆಚ್ಚು ಜನರಲ್ಲಿ, ಅದರಲ್ಲೂ ಮಕ್ಕಳೇ ಜ್ವರಕ್ಕೆ ತುತ್ತಾಗಿರುವುದು ಪಾಲಕರಲ್ಲಿ ಕೊರೊನಾ ಮೂರನೇ ಅಲೆಯ ಆತಂಕ ಕಾಡುತ್ತಿದೆ.
ಪರಿಸ್ಥಿತಿ ಅವಲೋಕಿಸಿರುವ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಸೂಕ್ತ ಚಿಕಿತ್ಸೆ ಹಾಗೂ ಹೆಚ್ಚಿನ ಚಿಕಿತ್ಸೆಗೆ ವೈದ್ಯರಿಗೆ ಸೂಚನೆ ನೀಡಿದ್ದಾರೆ.
ಈಗಾಗಲೇ ಜಿಲ್ಲಾ ಮಲೇರಿಯಾ ಅಧಿಕಾರಿ ಡಾ.ನಟರಾಜ್ ಅವರ ನೇತೃತ್ವದಲ್ಲಿ ವೈದ್ಯರ ತಂಡ ರಚನೆ ಮಾಡಲಾಗಿದೆ.
ಡೆಂಘಿ ಸೇರಿದಂತೆ ಹಲವಾರು ಪ್ರಕಾರ ತೊಂದರೆಗಳಿಂದ ಮಕ್ಕಳು ಬಳಲುತ್ತಿದ್ದು,
ಜಿಲ್ಲಾ ಆಸ್ಪತ್ರೆ ಹಾಗೂ ಬಾಪೂಜಿ ಎಸ್.ಎಸ್. ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಮಾಹಿತಿ ನೀಡಿದ್ದಾರೆ.