ವಿಜಯಸಾಕ್ಷಿ ಸುದ್ದಿ, ಸೌತಾಂಪ್ಟನ್
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ ಇಂಗ್ಲೆಂಡ್ ಪ್ರವಾಸ ಕೈಗೊಂಡಿರುವ ಭಾರತೀಯ ಕ್ರಿಕೆಟ್ ತಂಡದ ಆಟಗಾರರು ಕ್ವಾರಂಟೈನ್ ಮುಗಿಸಿ ,4 ದಿನಗಳ ಇಂಟ್ರಾ ಸ್ಕ್ವಾಡ್ ಅಭ್ಯಾಸ ಪಂದ್ಯ ಆಡುತ್ತಿದೆ.
ಈ ಅಭ್ಯಾಸ ಪಂದ್ಯದಲ್ಲಿ ರಿಷಭ್ ಪಂತ್ ಅರ್ಧ ಶತಕ ಬಾರಿಸಿ ತಮ್ಮ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿದ್ದಾರೆ.
ಜೂ. 18ರಿಂದ 22ರ ವರೆಗೆ ಭಾರತ ಮತ್ತು ನ್ಯೂಜಿಲೆಂಡ್ ಮಧ್ಯೆ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯ ನಡೆಯಲಿದೆ. ಹೀಗಾಗಿ ವಿರಾಟ್ ಕೊಹ್ಲಿ ಪಡೆ ತಂಡದೊಳಗೆ ಅಭ್ಯಾಸ ನಡೆಸುತ್ತಿದೆ. ಇನ್ನೊಂದೆಡೆ ಭಾರತ ತಂಡವನ್ನು ಫೈನಲ್ ನಲ್ಲಿ ಎದುರಿಸಲಿರುವ ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧ ದ್ವಿತೀಯ ಟೆಸ್ಟ್ ಪಂದ್ಯ ಆಡುತ್ತಿದೆ.
ವಿಕೆಟ್ ಕೀಪರ್, ಬ್ಯಾಟ್ಸ್‌ಮನ್ ರಿಷಭ್ ಪಂತ್ ಅಭ್ಯಾಸ ವೇಳೆಯೂ ಬಿರುಸಿನ ಬ್ಯಾಟಿಂಗ್ ನಡೆಸಿದ್ದಾರೆ. ಹೀಗಾಗಿ ಅವರು ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಉತ್ತಮ ಬ್ಯಾಟಿಂಗ್ ನ ನಿರೀಕ್ಷೆ ಮೂಡಿಸಿದ್ದಾರೆ. ಇದು ಭಾರತೀಯ ತಂಡದ ಆತ್ಮವಿಶ್ವಾಸಕ್ಕೆ ಕಾರಣವಾಗುತ್ತಿದೆ.