HomeEntertainmentಮತ್ತೊಂದು ಅವಕಾಶ ಕೊಡಿ: ತೆಲುಗು ಚಿತ್ರರಂಗಕ್ಕೆ ದಿಗಂತ್ ನೇರ ಮನವಿ

ಮತ್ತೊಂದು ಅವಕಾಶ ಕೊಡಿ: ತೆಲುಗು ಚಿತ್ರರಂಗಕ್ಕೆ ದಿಗಂತ್ ನೇರ ಮನವಿ

For Dai;y Updates Join Our whatsapp Group

Spread the love

ಹೈದರಾಬಾದ್: ನಟ ದಿಗಂತ್ ತಮ್ಮ ಸಿನಿ ಬದುಕಿನ ಹೊಸ ಅಧ್ಯಾಯ ಆರಂಭಿಸುವ ನಿಟ್ಟಿನಲ್ಲಿ ತೆಲುಗು ಚಿತ್ರರಂಗದತ್ತ ಮುಖ ಮಾಡಿದ್ದಾರೆ. ಸಮಂತಾ ನಟನೆಯ ‘ಮಾ ಇಂಟಿ ಬಂಗಾರಂ’ ಚಿತ್ರದ ಮೂಲಕ ಟಾಲಿವುಡ್‌ಗೆ ಎಂಟ್ರಿ ನೀಡಿರುವ ಅವರು, ಚಿತ್ರದ ಪ್ರೀ-ರಿಲೀಸ್ ಸಮಾರಂಭದಲ್ಲಿ ಭಾವುಕ ಮನವಿ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಕಾರ್ಯಕ್ರಮದಲ್ಲಿ ಮಾತನಾಡಿದ ದಿಗಂತ್, ‘ನಾನು ಕನ್ನಡ ಚಿತ್ರರಂಗದಿಂದ ಬಂದಿದ್ದೇನೆ. ಈ ಚಿತ್ರದಲ್ಲಿ ಅವಕಾಶ ನೀಡಿದ ಸಮಂತಾ, ನಿರ್ದೇಶಕಿ ನಂದಿನಿ ರೆಡ್ಡಿ ಹಾಗೂ ಇಡೀ ತಂಡಕ್ಕೆ ಧನ್ಯವಾದಗಳು’ ಎಂದು ಹೇಳಿದರು.

ಸಮಂತಾ ಅವರ ಕೆಲಸದ ಶೈಲಿಯನ್ನು ಶ್ಲಾಘಿಸಿದ ಅವರು, ನಂದಿನಿ ರೆಡ್ಡಿ ನಿರ್ದೇಶನದ ‘ಓಹ್ ಬೇಬಿ’ ಸಿನಿಮಾ ತಮ್ಮ ನೆಚ್ಚಿನ ಚಿತ್ರಗಳಲ್ಲಿ ಒಂದಾಗಿದೆ ಎಂದರು. ಚಿತ್ರತಂಡದ ಎಲ್ಲ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದ ಬಳಿಕ ದಿಗಂತ್ ಮಾಡಿದ ಮನವಿ ಎಲ್ಲರ ಗಮನ ಸೆಳೆಯಿತು.

‘ನನ್ನನ್ನು ನಾನು ಪ್ರೂವ್ ಮಾಡಿಕೊಳ್ಳಲು ಇನ್ನೊಂದು ಅವಕಾಶ ಬೇಕು. ಮತ್ತೆ ಅವಕಾಶ ಕೊಡುತ್ತೀರಾ?’ ಎಂದು ಅವರು ನೇರವಾಗಿ ಕೇಳಿದರು. ಸಭಿಕರಿಂದ ಸಕಾರಾತ್ಮಕ ಪ್ರತಿಕ್ರಿಯೆ ವ್ಯಕ್ತವಾಯಿತು.

ದಿಗಂತ್ ಈ ಹಿಂದೆ ವಿಜಯ್ ದೇವರಕೊಂಡ ಜೊತೆ ತೆಲುಗು ಸಿನಿಮಾವೊಂದರಲ್ಲಿ ನಟಿಸಲು ಸಿದ್ಧತೆ ನಡೆಸಿದ್ದರು. ಚಿತ್ರಕ್ಕಾಗಿ ತರಬೇತಿ ಕೂಡ ಪಡೆದಿದ್ದರು. ಆದರೆ ಆ ಯೋಜನೆ ಕಾರ್ಯರೂಪಕ್ಕೆ ಬಂದಿರಲಿಲ್ಲ. ಇದೀಗ ‘ಮಾ ಇಂಟಿ ಬಂಗಾರಂ’ ಮೂಲಕ ತೆಲುಗು ಪ್ರೇಕ್ಷಕರ ಮುಂದೆ ಬರುತ್ತಿರುವ ಅವರು, ಟಾಲಿವುಡ್‌ನಲ್ಲಿ ಮತ್ತಷ್ಟು ಅವಕಾಶಗಳ ನಿರೀಕ್ಷೆಯಲ್ಲಿದ್ದಾರೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!