ಮನನೊಂದು ಬಿಎಸ್ ವೈ ಅಭಿಮಾನಿ ಆತ್ಮಹತ್ಯೆ

0
Spread the love

ವಿಜಯಸಾಕ್ಷಿ ಸುದ್ದಿ, ಚಾಮರಾಜನಗರ

Advertisement

ಸಿಎಂ ಸ್ಥಾನಕ್ಕೆ ಬಿ.ಎಸ್. ಯಡಿಯೂರಪ್ಪ ಕೊಟ್ಟ ರಾಜೀನಾಮೆಯಿಂದ ಮನನೊಂದ ಅಭಿಮಾನಿಯೋರ್ವ ನೇಣಿಗೆ ಶರಣಾದ ಘಟನೆ ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದಲ್ಲಿ ವರದಿಯಾಗಿದೆ.

ರವಿ (35) ನೇಣಿಗೆ ಶರಣಾದ ಅಭಿಮಾನಿ.
ಹೋಟೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ ರವಿ ಬಿ.ಎಸ್.ಯಡಿಯೂರಪ್ಪನವರ ಅಪ್ಪಟ ಅಭಿಮಾನಿ. ಗ್ರಾಮದಲ್ಲಿ ಈತನಿಗೆ ರಾಜಾಹುಲಿ ಎಂದೇ ಕರೆಯುತ್ತಿದ್ದರು. ಬಿ.ಎಸ್. ವೈ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟ ಕ್ಷಣದಿಂದ ಸಾಕಷ್ಟು ನೊಂದಿದ್ದ. ನಿನ್ನೆ ರಾತ್ರಿ ಹೋಟೆಲ್ ನಲ್ಲೇ ನೇಣು ಹಾಕಿಕೊಂಡು‌ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅತಿರೇಕಕ್ಕೆ ಹೋಗಬೇಡಿ: ಬಿಎಸ್ ವೈ ಟ್ವಿಟ್

ನನ್ನ ರಾಜೀನಾಮೆಯಿಂದು ಬೊಮ್ಮಲಾಪುರದ ರವಿ ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ. ರಾಜಕಾರಣದಲ್ಲಿ ಏರಿಳಿತಗಳು ಸಹಜ. ಇದಕ್ಕಾಗಿ ಪ್ರಾಣತ್ಯಾಗಕ್ಕೆ ಮುಂದಾಗುವುದು ಸರಿಯಲ್ಲ. ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿದಲೂ ಭರಿಸಲು ಸಾಧ್ಯವಿಲ್ಲ. ಅಭಿಮಾನ ಅತಿರೇಕಕ್ಕೆ ಹೋಗಬಾರದೆಂದು ಕೈ ಮುಗಿದು ವಿನಂತಿದುವೆ. ರವಿ ಕುಟುಂಬದ ನೋವಿನೊಂದಿಗೆ ನಾನಿರುವೆ ಎಂದು ಹಂಗಾಮಿ ಸಿಎಂ ಯಡಿಯೂರಪ್ಪ ಟ್ವಿಟ್ ಮೂಲಕ ತಿಳಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here