ಗಾಂಧಿನಗರದಲ್ಲಿ ನಟಿ ರಮ್ಯಾ ಹಾಗೂ ದರ್ಶನ್ ಅಭಿಮಾನಿಗಳ ವಾರ್ ಜೋರಾಗಿದೆ. ಈಗಾಗಲೇ ಈ ಬಗ್ಗೆ ಹಲವು ನಟ, ನಟಿಯರು ಕಾಮೆಂಟ್ ಮಾಡಿದ್ದು ರಮ್ಯಾ ಪೊಲೀಸ್ ಠಾಣೆಯಲ್ಲಿ ದೂರು ಕೂಡ ದಾಖಲಿಸಿದ್ದಾರೆ. ಇದೆಲ್ಲದರ ಮಧ್ಯೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಜೊತೆ ಶಕ್ತಿ ಪೀಠ ಕಾಮಾಕ್ಯ ದೇವಿಯ ದರ್ಶನ್ ಪಡೆದಿದ್ದು ದರ್ಶನ್ ಪತ್ನಿ ವಿಜಯಲಕ್ಷ್ಮೀ ಫೋಟೋ ಹಂಚಿಕೊಂಡು ಪೋಸ್ಟ್ ಮಾಡಿದ್ದರು.
ವಿಜಯಲಕ್ಷ್ಮೀ ಪೋಸ್ಟ್ ಹಂಚಿಕೊಂಡ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಕೂಡ ಇನ್ಸ್ಟಾಗ್ರಾಮ್ ಸ್ಟೋರಿ ಹಾಕಿದ್ದಾರೆ. ಮನುಷ್ಯರು ಬಣ್ಣ ಬದಲಾಯಿಸಿದರೇನು? ರಾಯರು ನಮ್ಮ ಜೀವನವನ್ನೇ ಬದಲಾಯಿಸುತ್ತಾರೆ ಎಂದು ಬರೆದುಕೊಂಡಿದ್ದಾರೆ.
ವಿಜಯಲಕ್ಷ್ಮೀ ಪತಿ ದರ್ಶನ್ ಜೊತೆ ಕಾಮಾಕ್ಯ ದೇವಸ್ಥಾನಕ್ಕೆ ಮತ್ತೆ ಭೇಟಿ ಕೊಟ್ಟಿದ್ದು, ಗಂಡನ ಜೊತೆಗಿನ ಫೋಟೋವನ್ನು ಇನ್ಸ್ಟಾಗ್ರಾಮ್ನಲ್ಲಿ ಸ್ಟೋರಿ ಹಾಕಿ, ಹೆಚ್ಚು ಜನರು ನಿಮ್ಮನ್ನು ಕೆಳಕ್ಕೆ ತಳ್ಳಲು ಪ್ರಯತ್ನಿಸುತ್ತಾರೆ. ದೇವರು ನಿಮ್ಮನ್ನು ಉನ್ನತ ಸ್ಥಾನಕ್ಕೆ ತೆಗೆದುಕೊಳ್ಳುತ್ತಾನೆ. ದೇವರು ಎಲ್ಲರಿಗು ಒಳ್ಳೆಯದು ಮಾಡಲಿ ಎಂದು ಬರೆದುಕೊಂಡಿದ್ದರು.