ಮಸ್ಕಿಯಲ್ಲಿ 25 ಸಾವಿರಕ್ಕೂ ಅಧಿಕ ಅಂತರದಿಂದ ಜಯ ಗಳಿಸಿದ ಕಾಂಗ್ರೆಸ್

0
Spread the love

ವಿಜಯಸಾಕ್ಷಿ ಸುದ್ದಿ, ಮಸ್ಕಿ

Advertisement

ಮಸ್ಕಿ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರವಿಹಾಳ್ ಭರ್ಜರಿ ಜಯ ದಾಖಲಿಸಿದ್ದಾರೆ.

ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್ ಅವರ ವಿರುದ್ಧ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಜಯ ಸಾಧಿಸಿದ್ದಾರೆ. ಆರಂಭದಿಂದಲೂ ಮುನ್ನಡೆ ಸಾಧಿಸಿಕೊಂಡು ಬಂದಿದ್ದ ಕಾಂಗ್ರೆಸ್ ಅಭ್ಯರ್ಥಿ ವಿಜಯದ ಮಾಲೆ ಹಾಕಿಕೊಂಡಿದ್ದಾರೆ. ಸದ್ಯ ಅವರ ಗೆಲುವನ್ನು ಅಧಿಕೃತವಾಗಿ ಘೋಷಿಸುವುದೊಂದೆ ಬಾಕಿ ಉಳಿದಿದೆ.

ಚುನಾವಣಾ ಮತ ಎಣಿಕೆ ಬಾಕಿ ಇರುವಾಗಲೇ ಬಿಜೆಪಿ ಅಭ್ಯರ್ಥಿ ಪ್ರತಾಪ್ ಗೌಡ ಪಾಟೀಲ್, ತಮ್ಮ ಪಕ್ಷದ ಹಲವು ನಾಯಕರ ವಿರುದ್ಧ ಕಿಡಿ ಕಾರಿದರು. ನಮ್ಮವರೇ ನಮಗೆ ಮೋಸ ಮಾಡಿದರು. ಈ ಪರಿಸ್ಥಿತಿ ಕಾಂಗ್ರೆಸ್ ಗೆ ಅನುಕೂಲವಾಗಿದೆ ಎಂದು ಆರೋಪಿಸಿದ್ದರು.

2018ರ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅವರು 60,387 ಮತಗಳನ್ನು ಪಡೆದಿದ್ದರೆ, ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ತುರವಿಹಾಳ 60,174 ಮತಗಳನ್ನು ಗಳಿಸಿ ಸೋಲು ಕಂಡಿದ್ದರು. ಕೇವಲ 213 ಮತಗಳ ಅಂತರದಿಂದ ಪ್ರತಾಪ್ ಗೌಡ ಪಾಟೀಲ್ ಗೆದ್ದಿದ್ದರು. ಆದರೆ, ಆಪರೇಷನ್ ಕಮಲದಲ್ಲಿ ಪ್ರತಾಪ್ ಗೌಡ ಅವರು, ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಬಿಜೆಪಿಯಿಂದ ಸ್ಪರ್ಧಿಸಿದ್ದ ಬಸನಗೌಡ ಕಾಂಗ್ರೆಸ್ ಸೇರಿದ್ದರು. ಸದ್ಯ ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ತುರವಿಹಾಳ್ ಭರ್ಜರಿಯಾಗಿ ಜಯ ದಾಖಲಿಸಿದ್ದಾರೆ. ಉಪ ಚುನಾವಣೆಯಲ್ಲಿ 25 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಜಯ ದಾಖಲಿಸಿದ್ದಾರೆ.


Spread the love

LEAVE A REPLY

Please enter your comment!
Please enter your name here