ವಿಜಯಸಾಕ್ಷಿ ಸುದ್ದಿ, ಗದಗ
ಗದಗ ಜಿಲ್ಲೆಯಲ್ಲಿ ಸೋಂಕು ಮೂರು ದಿನಗಳಿಂದ ಸೋಂಕಿತರ ಸಂಖ್ಯೆಯಲ್ಲಿ ಭಾರೀ ಇಳಿಮುಖವಾಗುತ್ತಿದೆ. ನಿನ್ನೆಯಿಂದ ಎರಡು ನೂರರ ಗಡಿ ದಾಟಿದ್ದ ಸೋಂಕಿನ ಸಂಖ್ಯೆ, ಇವತ್ತು ಕೂಡ ಎರಡು ನೂರರ ಗಡಿ ದಾಟಿದೆ. ಸೋಂಕಿತರಕ್ಕಿಂತ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದವರೇ ಹೆಚ್ಚು.
ಇಂದಿನ 259 ಜನರಿಗೆ ಸೋಂಕು ತಗುಲುವ ಮೂಲಕ ಜಿಲ್ಲೆಯಲ್ಲಿ ಇದುವರೆಗೂ ಸೋಂಕಿತರ ಸಂಖ್ಯೆ 21665 ಕ್ಕೆ ಏರಿಕೆ ಕಂಡಿದೆ.
ಗದಗ ನಗರ ಹಾಗೂ ತಾಲೂಕಿನಲ್ಲಿ -93, ಮುಂಡರಗಿ-27, ನರಗುಂದ-31, ರೋಣ-24, ಶಿರಹಟ್ಟಿ-70, ಹೊರಜಿಲ್ಲೆಯ-14 ಸೇರಿದಂತೆ 259 ಪ್ರಕರಣಗಳು ದೃಢಪಟ್ಟಿವೆ.
ಜಿಲ್ಲಾಡಳಿತ ಹೊರಡಿಸಿದ ಮಾಹಿತಿಯಂತೆ ನಾಲ್ವರು ಮೃತಪಟ್ಟಿದ್ದು, ಮೃತರ ಸಂಖ್ಯೆ 222 ಕ್ಕೇರಿದೆ.
ಗದಗ ತಾಲೂಕಿನ ಕಳಸಾಪೂರ ನಿವಾಸಿ
75 ವರ್ಷದ ವ್ಯಕ್ತಿ ಮೇ-14 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ನಿಂದಾಗಿ ಮೇ 23 ರಂದು ಮೃತಪಟ್ಟಿದ್ದಾರೆ.
ಗದಗ ಶಹರ ನಿವಾಸಿ 62 ವರ್ಷದ ವ್ಯಕ್ತಿ ಮೇ -12 ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಕೋವಿಡ್ ದೃಢಪಟ್ಟಿತ್ತು, ಮೇ 24 ರಂದು ಮೃತಪಟ್ಟಿದ್ದಾರೆ.
ಗದಗ ತಾಲೂಕಿನ ಕಳಸಾಪೂರ ನಿವಾಸಿ 68 ವರ್ಷದ ವ್ಯಕ್ತಿ ಮೇ 14 ರಂದು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಮೇ 24 ರಂದು ಮೃತಪಟ್ಟಿದ್ದಾರೆ.
ಧಾರವಾಡ ಜಿಲ್ಲೆಯ ಹೆಬ್ಬಾಳ ನಿವಾಸಿ 40 ವರ್ಷದ ವ್ಯಕ್ತಿ ಮೇ 16 ರಂದು ಜಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಮೇ 24 ರಂದು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
ಇವರೆಲ್ಲರ ಅಂತ್ಯಕ್ರಿಯೆ ಕೋವಿಡ್ ನಿಯಮಾವಳಿ ಪ್ರಕಾರ ನಡೆಸಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಕೂಡ ದಾಖಲೆಯ 447 ಜನರು ಸೋಂಕಿನಿಂದ ಗುಣಮುಖರಾಗಿದ್ದು, ಇದುವರೆಗೂ 18388 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಇಂದು ಜಿಲ್ಲೆಯಲ್ಲಿ 3055 ಪ್ರಕರಣಗಳು ಸಕ್ರಿಯವಾಗಿದ್ದು ಅವರೆಲ್ಲರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇನ್ನೂ 185 ಜನರ ವರದಿ ಬರಲು ಬಾಕಿ ಇದೆ ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.