ವಿಜಯಸಾಕ್ಷಿ ಸುದ್ದಿ, ಮೈಸೂರು
ಜಿಲ್ಲೆಯಲ್ಲಿ ಮಹಾಮಾರಿ ಕಟ್ಟಿ ನಿಟ್ಟಿನಲ್ಲಿ ಜಿಲ್ಲಾಡಳಿತ ಮತ್ತೊಂದು ನಿರ್ಧಾರ ಕೈಗೊಂಡಿದೆ. ಶೂನ್ಯ ಕೋವಿಡ್ ಹೊಂದುವ ಗ್ರಾಮಗಳಿಗೆ ಪ್ರಶಸ್ತಿ ನೀಡಲು ಜಿಲ್ಲಾಡಳಿತ ಮುಂದಾಗಿದೆ. ಈ ಕುರಿತು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ಹೇಳಿದ್ದಾರೆ.
ಗ್ರಾಪಂ ವ್ಯಾಪ್ತಿಯಲ್ಲಿ ಕೋವಿಡ್ ಮುಕ್ತ ಮಾಡಿದರೆ ಪ್ರಶಸ್ತಿ ನೀಡಲಾಗುವುದು. ಈ ಮೂಲಕ ಕೊರೊನಾ ನಿಯಂತ್ರಣಕ್ಕೆ ಮುಂದಾಗಿದ್ದೇವೆ. ಅಲ್ಲದೇ, ಅಗತ್ಯ ವಸ್ತುಗಳ ಖರೀದಿಗೆ ಸಮಯ ಕಡಿತಗೊಳಿಸಲಾಗುವುದು.
ಬೆಳಗ್ಗೆ 6 ರಿಂದ 8 ಗಂಟೆವರೆಗೆ ಮಾತ್ರ ಅವಕಾಶ ನೀಡುವುದರ ಬಗ್ಗೆ ಚಿಂತನೆ ನಡೆದಿದೆ ಎಂದು ತಿಳಿಸಿದ್ದಾರೆ.
ಮುಂದಿನ ಹತ್ತು ದಿನಗಳಲ್ಲಿ ಕೋವಿಡ್ ಕಂಟ್ರೋಲ್ ಗೆ ಸಿಗುವ ಸಾಧ್ಯತೆ ಇದೆ. ಇದಕ್ಕೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳುವುದರ ಬಗ್ಗೆ ಚಿಂತನೆ ಮಾಡಲಾಗುವುದು.
ಸದ್ಯ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವಿಟಿ ದರ ಶೇ. 40ರ ಸರಾಸರಿಯಲ್ಲಿದೆ. ಮೈಸೂರು ತಾಲೂಕಿನಲ್ಲಿ ಶೇ. 80ರಷ್ಟಿದೆ. ನಗರ ಪ್ರದೇಶದಲ್ಲಿ ಶೇ. 35 ರಷ್ಟಿದೆ. ನಂಜನಗೂಡಿನಲ್ಲಿ ಶೇ. 80 ರಷ್ಟಿದೆ ಎಂದು ಜಿಲ್ಲಾಧಿಕಾರಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ವಿಶೇಷ ಕಾರ್ಯಕ್ರಮ ಮಾಡಿದರೆ, ಅದರ ಮಾಹಿತಿ ನೀಡುವಂತೆ ಪ್ರಧಾನಿ ಹೇಳಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಮಿತ್ರ ಮಾಡಿದ್ದೇವೆ. ಕೋವಿಡ್ ಚೆನ್ನಾಗಿ ವರ್ಕ್ ಆಗುತ್ತಿದೆ. ಜಿಲ್ಲೆಯ 175 ಪ್ರಾಥಮಿಕ ಕೇಂದ್ರಗಳು ಕೋವಿಡ್ ಮಿತ್ರ ಆಗಿವೆ. ಸೋಂಕಿನ ಲಕ್ಷಣ ಇದ್ದವರು ಅಲ್ಲಿ ಹೋಗಿ ಪರೀಕ್ಷೆ ಮಾಡಿಸಿಕೊಳ್ಳುತ್ತಿದ್ದಾರೆ.
ಸೋಂಕಿತರಿಗೆ ಮೊದಲ 5 ದಿನ ಮುಖ್ಯವಾದದ್ದು, ತಕ್ಷಣ ಅಗತ್ಯ ಮೆಡಿಸಿನ್ ಕೊಡುವ ಕೆಲಸವಾಗುತ್ತಿದೆ. ಇದರಿಂದ ನಗರ ಆಸ್ಪತ್ರೆಗಳನ್ನು ಅವಲಂಬನೆ ಮಾಡುವುದು ಕಡಿಮೆಯಾಗಿದೆ. ಇದೇ ರೀತಿ ನಗರದಲ್ಲಿಯೂ ಕೋವಿಡ್ ಸೆಂಟರ್ ತೆರೆಯುತ್ತಿದ್ದೇವೆ ಎಂದು ಹೇಳಿದ್ದಾರೆ.