ವಿಜಯಸಾಕ್ಷಿ ಸುದ್ದಿ, ಬಾಗಲಕೋಟ
ಮಹಾಮಾರಿ ಎರಡನೇ ಅಲೆ ತಡೆಯುವಲ್ಲಿ ಪ್ರಧಾನಿ ಮೋದಿ ಹಾಗೂ ಯಡಿಯೂರಪ್ಪ ಸರ್ಕಾರ ಸಂಪೂರ್ಣ ವಿಫಲವಾಗಿವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಜಿಲ್ಲೆಯ ಬಾದಾಮಿ ಪಟ್ಟಣಕ್ಕೆ ಆಗಮಿಸಿ ಕೊರೊನಾ ನಿಯಂತ್ರಣ ಕುರಿತಾದ ಕ್ರಮಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2ನೇ ಅಲೆಯ ಬಗ್ಗೆ ಮಾಹಿತಿ ಇದ್ದರೂ ಸರ್ಕಾರ ಜಾಗೃತಿ ವಹಿಸಲಿಲ್ಲ. ಆಕ್ಸಿಜನ್, ರೆಮ್ ಡಿಸಿವರ್, ವೆಂಟಿಲೇಟರ್ ಬೆಡ್ಗಾಳ ಸಿದ್ದತೆ ನಡೆಸಲಿಲ್ಲ. ರೋಗಿಗಳಿಗೆ ಆಕ್ಸಿಜನ್, ರೆಮ್ ಡಿಸಿವರ್ ಇಂಜೆಕ್ಷನ್ ಪೂರೈಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿಎಂ ಬದಲಾವಣೆ ಆಗಬಹುದು ಎಂಬ ಮಾಹಿತಿ ನನಗಿದೆ. ಆದರೆ, ಕೊರೊನಾದಿಂದಾಗಿ ಈ ವಿಷಯ ಮುಂದಕ್ಕೆ ಹೋಗಿರಬಹುದು. ನಾನೊಬ್ಬ ವಿರೋಧ ಪಕ್ಷದ ನಾಯಕ. ಶ್ಯಾಡೋ ಆಫ್ ಚೀಫ್ ಮಿನಿಸ್ಟರ್ ಇದ್ದಾಂಗೆ ನಾನು ಮಾಹಿತಿ ತಿಳಿದುಕೊಳ್ಳುವಂತಿಲ್ಲ ಎಂದರೆ ಇದು ಪ್ರಜಾಪ್ರಭುತ್ವದ ವ್ಯವಸ್ಥೆ ನಾ? ಎಂದು ಪ್ರಶ್ನಿಸಿ ಬೇಸರ ವ್ಯಕ್ತಪಡಿಸಿದ್ದಾರೆ.