ವಿಜಯಸಾಕ್ಷಿ ಸುದ್ದಿ, ಬೆಂಗಳೂರು
Advertisement
ಯಾಸ್ ಚಂಡಮಾರುತದಿಂದಾಗಿ ರಾಜ್ಯದ ಹಲವೆಡೆ ಇಂದಿನಿಂದ ಮೇ. 29ರ ವರೆಗೆ ಮಳೆರಾಯನ ಅಬ್ಬರ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈಗಾಗಲೇ ರಾಜ್ಯದ ಹಲವು ಪ್ರದೇಶಗಳಲ್ಲಿ ಮಳೆರಾಯನ ಅಬ್ಬರ ಶುರುವಾಗಿದೆ. ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಸೇರಿದಂತೆ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಈಗ ಯಾಸ್ ಚಂಡಮಾರುತದ ಪರಿಣಾಮ ಬಂಗಾಳ ಕೊಲ್ಲಿಯಲ್ಲಿ ಪ್ರಭಲ ಚಂಡಮಾರುತ ಕಾಣಿಸಿಕೊಂಡಿದೆ.
ಯಾಸ್ ಚಂಡಮಾರುತದಿಂದಾಗಿ ಮೇ. 26ರಂದು ಉತ್ತರ ಒಡಿಶಾ ಮತ್ತು ಪಶ್ಚಿಮ ಬಂಗಾಳದ ಕರಾವಳಿಯಲ್ಲಿ ವ್ಯಾಪಕ ಹಾನಿ ಸಂಭವಿಸುವ ಸಾಧ್ಯತೆ ಇದೆ. ಅಪ್ಪಳಿಸುವ ಸಮಯದಲ್ಲಿ, ಗಾಳಿಯ ವೇಗವು 155 ಕಿ.ಮೀ ನಿಂದ 185 ಕಿ.ಮೀ ವೇಗದಲ್ಲಿರುತ್ತದೆ ಎಂದು ನಾವು ನಿರೀಕ್ಷಿಸುತ್ತಿದ್ದೇವೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.