ವಿಜಯಸಾಕ್ಷಿ ಸುದ್ದಿ, ಮುದ್ದೆಬಿಹಾಳ
ತಾಲೂಕಿನ ಜಟ್ಟಗಿ ಗ್ರಾಮದ ಯುವ ಯೋಧ ಮಂಜುನಾಥ ಯಲ್ಲಪ್ಪ ಹೂಗಾರ (21) ದೇಶದ ರಾಜಧಾನಿ ದೆಹಲಿಯ ಮಿರಟ್ ಬಳಿ ಇರುವ ಎಂಇಜಿ ಯೂನಿಟ್-9ರ ಭಾರತೀಯ ಸೇನಾ ಕ್ಯಾಂಪ್‍ನಲ್ಲಿ ಕರ್ತವ್ಯದಲ್ಲಿದ್ದ ಸಮಯದಲ್ಲೇ ಭಾನುವಾರ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಸೇನಾ ಅಧಿಕಾರಿಗಳು ಈ ವಿಷಯವನ್ನು ಇಲ್ಲಿನ ಪೊಲೀಸ್ ಠಾಣೆಗೆ ದೂರವಾಣಿ ಕರೆ ಮಾಡಿ, ಕುಟುಂಬ ವರ್ಗಕ್ಕೆ ಮಾಹಿತಿ ನೀಡಿದ್ದಾರೆ.
ಮೃತ ಯೋಧನಿಗೆ ತಂದೆ, ತಾಯಿ, ಇಬ್ಬರು ಸಹೋದರ, ಸಹೋದರಿಯರು ಸೇರಿ ಅಪಾರ ಬಂಧು ಬಳಗ ಇದೆ.
ಮಂಜುನಾಥ ಹೂಗಾರ ಈತ ಸೇನೆಗೆ ಆಯ್ಕೆಯಾಗಿ ತರಬೇತಿ ಪಡೆದು ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ಎಂಇಜಿ ಯುನಿಟ್-9ನಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದ.
ಆತನ ಆತ್ಮಹತ್ಯೆಗೆ ಕಾರಣ ಇನ್ನೂ ಸ್ಪಷ್ಟವಾಗಿ ತಿಳಿದುಬಂದಿಲ್ಲ.
ದೆಹಲಿಯ ಸೇನಾ ಆಸ್ಪತ್ರೆಗೆ ಪಾರ್ಥೀವ ಶರೀರವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದ್ದು, ಮಂಗಳವಾರ ಅಥವಾ ಬುಧವಾರ ಪಾರ್ಥೀವ ಶರೀರ ಗ್ರಾಮಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.
ವರದಿ : ಡಾ. ಅಬ್ದುಲ್ ರಜಾಕ್