ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ಚಂದನವನದ ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ಹುಟ್ಟು ಹಬ್ಬದ ಅಂಗವಾಗಿ ಅವರ ಅಭಿನಯದ ಬಹುನಿರೀಕ್ಷೆಯ 777 ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
ಈ ಟೀಸರ್ ಮೂಲಕ ಅಭಿಮಾನಿಗಳಲ್ಲಿ ಇನ್ನಷ್ಟು ಕುತೂಹಲ ಕೆರಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಈ ಚಿತ್ರ 5 ಭಾಷೆಗಳಲ್ಲಿ ತೆರೆಗೆ ಅಪ್ಪಳಿಸಲು ಸಿದ್ಧವಾಗುತ್ತಿದೆ.
ಕನ್ನಡ, ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಯಲ್ಲಿ ಜನರನ್ನು ತಲುಪಲಿದೆ. ಇನ್ನೂ ವಿಶೇಷ ಎಂದರೆ ಈ ಚಿತ್ರ ಮಲಯಾಳಂನಲ್ಲಿಯೂ ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಅಲ್ಲದೇ, ಅಲ್ಲಿಯೂ ದೊಡ್ಡ ಮಟ್ಟದಲ್ಲಿ ಬಿಡುಗಡೆಯಾಗಲು ಸಿದ್ಧತೆ ಮಾಡಿಕೊಳ್ಳುತ್ತಿದೆ.
‘777 ಚಾರ್ಲಿ’ ನಾಯಿ ಮತ್ತು ಮನುಷ್ಯನ ನಡುವಿನ ಭಾವನಾತ್ಮಕ ಸಂಬಂಧದ ಕುರಿತು ತಿಳಿಸಲಿದೆ. ಈ ಚಿತ್ರ ಕೂಡ ಚಂದನವನದಲ್ಲಿನ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿದೆ. ಅಂದುಕೊಂಡಂತೆ ನಡೆದಿದ್ದರೆ, ಇಷ್ಟು ಹೊತ್ತಿಗೆ ಈ ಚಿತ್ರ ಕೂಡ ಜನರ ಕೈಗೆ ಸಿಗುತ್ತಿತ್ತು. ಆದರೆ, ಕೊರೊನಾದಿಂದಾಗಿ ಈ ಅಭಿಮಾನಿಗಳಿಗೆ ನಿರಾಸೆ ಮೂಡುವಂತಾಗಿದೆ. ಸದ್ಯ ಟೀಸರ್ ಅಭಿಮಾನಿಗಳ ಮೆಚ್ಚುಗೆಗೆ ಕಾರಣವಾಗುತ್ತಿದೆ.