ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ

0
Spread the love

ವಿಜಯಸಾಕ್ಷಿ ಕನ್ನಡ ದಿನಪತ್ರಿಕೆ, ಗದಗ
ಜಿಲ್ಲೆಯ ಎಲ್ಲ ಪ್ರಮುಖ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣಕ್ಕೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಗೆ ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಕರವೇ ರಾಜ್ಯ ಉಪಾಧ್ಯಕ್ಷ ಎಚ್.ಎಸ್. ಸೋಂಪುರ, ಗದಗ ಜಿಲ್ಲೆ ರಚನೆಯಾಗಿ ೨೦ ವರ್ಷಗಳಾದರೂ ಇನ್ನೂ ಅನೇಕ ರಸ್ತೆಗಳನ್ನು ಅಭಿವೃದ್ದಿ ಮಾಡುವಲ್ಲಿ ಅನೇಕ ಸರಕಾರಗಳು ಮುಂದಾಗಿಲ್ಲ. ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಶಾಸಕರು, ಅಧಿಕಾರಿಗಳು ರಸ್ತೆಗಳ ಬಗ್ಗೆ ಯಾರೊಬ್ಬರೂ ಮಾತಾಡುತ್ತಿಲ್ಲ. ಈ ವಿಷಯವಾಗಿ ಕರ್ನಾಟಕ ರಕ್ಷಣಾ ವೇದಿಕೆ ಅನೇಕ ಬಾರಿ ಆಯಾ ತಾಲೂಕಿನಲ್ಲಿ ಮತ್ತು ಗದಗ ಜಿಲ್ಲೆಯಲ್ಲಿ ಅಧಿಕಾರಿಗಳಿಗೆ, ಶಾಸಕರಿಗೆ ಶಾಶ್ವತ ರಸ್ತೆ ಅಭಿವೃದ್ಧಿ ಮಾಡಬೇಕೆಂದು ಮನವಿ ಮಾಡಿಕೊಂಡರು ಪ್ರಯೋಜನವಾಗಿಲ್ಲ. ಅನೇಕ ಬಾರಿ ರಾಜ್ಯ ಸರ್ಕಾರಕ್ಕೂ ಕೂಡಾ ಮನವಿ ಮಾಡಿಕೊಂಡು ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು.
ಜಿಲ್ಲೆಯ ಗದಗ- ಗಜೇಂದ್ರಗಡ, ರೋಣ-ಹೊಳೆಆಲೂರ, ಲಕ್ಷ್ಮೇಶ್ವರ-ಗದಗ, ನರಗುಂದ-ಗದಗ, ಮುಂಡರಗಿ-ಹೆಬ್ಬಾಳ, ಶಿರಹಟ್ಟಿ-ಗದಗ ರಸ್ತೆಗಳು ಸೇರಿದಂತೆ ಇನ್ನೂ ಅನೇಕ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟಿವೆ. ಈ ರಸ್ತೆಗಳನ್ನು ಅಭಿವೃದ್ಧಿಪಡಿಸಬೇಕು. ಸರಕಾರ ವಿಶೇಷ ಪ್ಯಾಕೇಜ್ ನೀಡಿ ರಸ್ತೆ ದುರಸ್ತಿಗೆ ಆಗ್ರಹಿಸಬೇಕು ಎಂದು ತಿಳಿಸಿದರು.
ಕರವೇ ಜಿಲ್ಲಾಧ್ಯಕ್ಷ ಹನಮಂತ ಅಬ್ಬಿಗೇರಿ ಮಾತನಾಡಿ, ಜಿಲ್ಲೆಯಲ್ಲಿ ರಸ್ತೆಗಳು ಎಷ್ಟೊಂದು ಹದಗೆಟ್ಟಿವೆ ಎಂದರು ಕೆಲವೊಂದು ಕಡೆ ಅಪಘಾತಕ್ಕೀಡಾಗಿ ಚಿಕ್ಕ ವಾಹನಗಳು ಉರುಳಿ ಬಿದ್ದವೆ. ಬೈಕ ಸವಾರರು ಬಿದ್ದು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಬಸ್‌ಗಳ ಸಂಚಾರಕ್ಕೆ ಬಸ್ ಮತ್ತು ಇತರೆ ವಾಹನ ಚಾಲಕರು ಜೀವವನ್ನು ಕೈಯಲ್ಲಿ ಇಟ್ಟುಕೊಂಡು ವಾಹನ ಚಲಾವಣೆ ಮಾಡುವ ಪರಿಸ್ಥಿತಿ ಬಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ನಗರದ ಮಹಾತ್ಮಾ ಗಾಂಧಿ ವೃತ್ತದಿಂದ ಮುಳಗುಂದ ನಾಕಾದಲ್ಲಿರುವ ಲೋಕೋಪಯೋಗಿ ಇಲಾಖೆ ಕಚೇರಿ ವರೆಗೆ ಪಾದಯಾತ್ರೆ ನಡೆಸಿದ ಕಾರ್ಯಕರ್ತರು, ಲೋಕೋಪಯೋಗಿ ಇಲಾಖೆ ಅಧಿಕಾರಿಗಳ ಮೂಲಕ ಸಚಿವರಿಗೆ ಮನವಿ ಸಲ್ಲಿಸಲಾಯಿತು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣು ಗೋಡಿ, ಶರಣಪ್ಪ ಪುರ್ತಗೇರಿ, ನಿಂಗನಗೌಡ ಮಾಲಿಪಾಟೀಲ, ನೀಲನಗೌಡ ಪಾಟೀಲ, ಉಮೇಶ ಮೇಟಿ, ರಜಾಕ ಢಾಲಾಯತ, ಬಸವರಾಜ ಮೇಟಿ, ಬಸವರಾಜ ಹೊಗೆಸೊಪ್ಪಿನ, ನಿಂಗಪ್ಪ ಹೊನ್ನಾಪೂರ, ವಿರುಪಾಕ್ಷಿ ಹಿತ್ತಲಮನಿ, ಹನಮಂತ ಪೂಜಾರ, ಆಶು ಜೂಲಗುಡ್ಡ ಇತರರು ಉಪಸ್ಥಿತರಿದ್ದರು.

Advertisement

Spread the love

LEAVE A REPLY

Please enter your comment!
Please enter your name here