HomeBengaluru Newsರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ ಸಾವಿನ ಸಂಖ್ಯೆ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಆತಂಕ ಮೂಡಿಸುತ್ತಿದೆ ಸಾವಿನ ಸಂಖ್ಯೆ

For Dai;y Updates Join Our whatsapp Group

Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

ರಾಜ್ಯದಲ್ಲಿ ಇಂದು ಸೋಂಕಿನ ಪ್ರಮಾಣದಲ್ಲಿ ಇಳಿಕೆ ಕಂಡರೂ ಸಾವಿನ ಸಂಖ್ಯೆ ಮಾತ್ರ ಆತಂಕ ಮೂಡಿಸುತ್ತಿದೆ. ಇಂದು ರಾಜ್ಯದಲ್ಲಿ 26,811 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದು, 503 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಇಂದು 40,741 ಜನ ಗುಣಮುಖರಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಲ್ಲಿಯವರೆಗೆ ರಾಜ್ಯದಲ್ಲಿ 24,99,784 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಒಟ್ಟು 20,62,910 ಜನ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಅಲ್ಲದೇ, ಸಕ್ರಿಯ ಪ್ರಕರಣಗಳ ಸಂಖ್ಯೆ 4,09,924ಕ್ಕೆ ತಲುಪಿದೆ.
ಇಂದು 503 ಜನ ಮಹಾಮಾರಿಗೆ ಬಲಿಯಾಗಿದ್ದಾರೆ. ಇಲ್ಲಿಯವರೆಗೆ ರಾಜ್ಯದಲ್ಲಿ ಒಟ್ಟು 26,929 ಜನ ಸಾವನ್ನಪ್ಪಿದಂತಾಗಿದೆ.

ಇಂದು ಬೆಂಗಳೂರಿನಲ್ಲಿ 6,433 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಅಲ್ಲದೇ, 285 ಜನ ಸಾವನ್ನಪ್ಪಿದ್ದಾರೆ. ಇನ್ನುಳಿದಂತೆ ಮೈಸೂರು ಜಿಲ್ಲೆಯಲ್ಲಿ 2,792, ಹಾಸನ 1,471, ತುಮಕೂರು 1,399, ದಾವಣಗೆರೆ 1,309, ಬೆಳಗಾವಿ 1,205 ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಪ್ರಕರಣಗಳು ದಾಖಲಾಗಿವೆ.


Spread the love
Vijaya Sakshi
Vijaya Sakshi
Vijayasakshi is a Kannada Daily News Paper Publishing From Gadag. Get Latest Gadag District News Live Updates Online In Vijayasakshi.Com Vijayasakshi Kannada Daily Newspaper Provide News On Gadag District Including Karnataka, India News In Kannada. Contact-9448326533/9019256545 E-mail-vijayasakshidaily@gmail.com

LEAVE A REPLY

Please enter your comment!
Please enter your name here

E-Paper

E-paper

Must Read

spot_img
error: Content is protected !!