ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಇಂದು ಮತ್ತೆ ಏರಿಕೆ ಕಂಡಿದೆ. ರಾಜ್ಯದಲ್ಲಿ ಇಂದು 4,272 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 28,31,026ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳಲ್ಲಿ ಮಹಾಮಾರಿಗೆ 115 ಜನ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 34,654ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವಾಲಯ ಪ್ರಕಟಿಸಿದೆ.
ಬೆಂಗಳೂರಿನಲ್ಲಿ ಇಂದು 955 ಜನರಲ್ಲಿ ಸೋಂಕು ದೃಢಪಟ್ಟಿದೆ. ಈ ಮೂಲಕ ನಗರದಲ್ಲಿ ಸೋಂಕಿತರ ಸಂಖ್ಯೆ 12,10,642ಕ್ಕೆ ಏರಿಕೆಯಾಗಿದೆ. ಸೋಂಕಿಗೆ 16 ಜನ ಬಲಿಯಾಗಿದ್ದಾರೆ.
ರಾಜ್ಯಾದ್ಯಂತ ಇಂದು 1,65,010 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 4,272 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 2.58ಕ್ಕೆ ಇಳಿದಿದೆ.



