ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದಲ್ಲಿ ಕಠಿಣ ಲಾಕ್ ಡೌನ್ ಹೇರಿದ್ದರಿಂದಾಗಿ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತ ಸಾಗುತ್ತಿದೆ. ಆದರೆ, ಮರಣ ಮೃದಂಗ ಮಾತ್ರ ಆತಂಕ ಮೂಡಿಸುತ್ತಿದೆ.
ಇಂದು 22,758 ಜನರಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, 588 ಜನ ಬಲಿಯಾಗಿದ್ದಾರೆ. ಈ ಮೂಲಕ ಸಾವಿನ ಸಂಖ್ಯೆ 26,399ಕ್ಕೆ ಏರಿಕೆ ಕಂಡಿದೆ.
ಕಳೆದ 24 ಗಂಟೆಯಲ್ಲಿ ರಾಜ್ಯದಲ್ಲಿ 22,758 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರೊಂದಿಗೆ ಸೋಂಕಿತರ ಸಂಖ್ಯೆ 24,72,973ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.
ಇಂದು ಬೆಂಗಳೂರಿನಲ್ಲಿ 6,243 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಸೋಂಕಿಗೆ 350 ಮಂದಿ ಬಲಿಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 38,224 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 20,22,172ಕ್ಕೆ ಏರಿಕೆಯಾಗಿದೆ.