ವಿಜಯಸಾಕ್ಷಿ ಸುದ್ದಿ, ಬೆಂಗಳೂರು
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನು ಎರಡು ದಿನ ಮಳೆರಾಯನ ಅಬ್ಬರ ಇರಲಿದ್ದು, ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು, ಚಿತ್ರದುರ್ಗ, ಬೆಳಗಾವಿ, ಬಾಗಲಕೋಟೆ, ಬಿಜಾಪುರ, ಕಲಬುರಗಿ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು ಯಲ್ಲೋ ಅಲರ್ಟ್ ಘೋಷಿಸಲಾಗಿದೆ.
ಅಲ್ಲದೇ, ಬೆಂಗಳೂರಿನಲ್ಲಿ ಎರಡು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದ್ದು, ರಾಜ್ಯಾದ್ಯಂತ ಮಳೆ ಇಳಿಕೆಯಾಗುವ ಸಾಧ್ಯತೆ ಇದೆ.
ಈಗಾಗಲೇ ಎರಡು ದಿನಗಳಿಂದ ಬೆಂಗಳೂರಿನಲ್ಲಿ ಗುಡುಗು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಈ ವರ್ಷ ಸಿಲಿಕಾನ್ ಸಿಟಿಯಲ್ಲಿ ನಿರೀಕ್ಷೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದಕ್ಕೆ ಬಿಬಿಎಂಪಿ ಅಧಿಕಾರಿಗಳು ಸೂಕ್ತವಾಗಿ ಸಿದ್ಧರಾಗಬೇಕಾದ ಅನಿವಾರ್ಯತೆ ಇದೆ.