ವಿಜಯಸಾಕ್ಷಿ ಸುದ್ದಿ, ಬೆಂಗಳೂರು
Advertisement
ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯ ಅಬ್ಬರ ಕಡಿಮೆಯಾಗಿತ್ತು. ಆದರೆ, ಮತ್ತೆ ಮಳೆಯ ಆರ್ಭಟ ಶುರುವಾಗಲಿದ್ದು, ಇವತ್ತಿನಿಂದ 3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂ. 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಅಲರ್ಟ್ ಘೋಷಿಸಲಾಗಿದೆ. ಜೂ. 30ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೆಂಗಳೂರಿನಲ್ಲಿ ಕೂಡ ಇಂದು ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದ್ದು, ಬೆಳಗ್ಗೆಯಿಂದಲೇ ಮಳೆ ಆರಂಭವಾಗಿದೆ.