ವಿಜಯಸಾಕ್ಷಿ ಸುದ್ದಿ, ಗದಗ
ಕೊರೊನಾ ಸೋಂಕಿನಿಂದ ಅನೇಕ ವರ್ಗದ ಜನರು ಸಂಕಷ್ಟಕ್ಕೀಡಾಗಿದ್ದಾರೆ. ಅದರಲ್ಲೂ ರೈತಾಪಿ ವರ್ಗದ ಜನರ ಸಂಕಷ್ಟ ಹೇಳತೀರದು. ಹೀಗಾಗಿ ಸರಕಾರ ಮುಂಗಾರು ಬಿತ್ತನೆಗೆ ರೈತ ಸಮುದಾಯಕ್ಕೆ ಬೀಜ ಹಾಗೂ ಗೊಬ್ಬರ ಉಚಿತವಾಗಿ ನೀಡಬೇಕು ಎಂದು ಗದಗ ಜಿಲ್ಲಾ ಕಾಂಗ್ರೆಸ್ ನ ಅಲ್ಪಸಂಖ್ಯಾತರ ಘಟಕದ ಸಂಯೋಜಕ ರಾಜು ಪೆಂಡಾರ ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟನೆ ನೀಡಿರುವ ಅವರು, ಲಾಕ್ ಡೌನ್ ನಿಂದ ರೈತರು ತುಂಬಾ ಸಂಕಷ್ಟ ಅನುಭವಿಸುತ್ತಿದ್ದಾರೆ. ಕೈಯಲ್ಲಿ ಹಣವಿಲ್ದೇ ಪರಿತಪಿಸುವಂತಹ ಸಮಯದಲ್ಲಿ ಸರಕಾರ ಅವರ ಕೈ ಹಿಡಿಯಲು ಮುಂದಾಗಬೇಕು ಎಂದು ಆಗ್ರಹಿಸಿದ್ದಾರೆ.
ರಾಜ್ಯ ಕೃಷಿ ಸಚಿವರು ಕೂಡಲೇ ಈ ಬಗ್ಗೆ ಗಮನ ಹರಿಸಿ ರೈತರ ಕಷ್ಟಕ್ಕೆ ಸ್ಪಂದಿಸಬೇಕು ಎಂದು ಪೆಂಡಾರ ಮನವಿ ಮಾಡಿದ್ದಾರೆ.



