ಹಾವೇರಿಯಲ್ಲಿ ಕೃಷಿ ಸಚಿವ ಬಿ.ಸಿ. ಪಾಟೀಲ ಹೇಳಿಕೆ
ವಿಜಯಸಾಕ್ಷಿ ಸುದ್ದಿ, ಹಾವೇರಿ
ವಾಜಪೇಯಿ, ನೆಹರು ಅಂಥವರನ್ನು ಯಾರೇ ಆಗಲಿ ಗೌರಿಸಬೇಕಾಗುತ್ತದೆ. ಅಂಥವರ ಬಗ್ಗೆ ಕೀಳುಮಟ್ಟದ ಭಾಷೆ ಬಳಸಬಾರದು ಎಂಬುದು ನನ್ನ ವಯಕ್ತಿಕ ಭಾವನೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.
ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಿನ್ನೆ ಬೆಂಗಳೂರಿನಲ್ಲಿ ನಡೆದ ಕೈಗಾರಿಕೋದ್ಯಮಿಗಳ ಸಭೆಯಲ್ಲಿ ಸಿಎಂ ಪುತ್ರ ಭಾಗಿ ವಿಚಾರ ಕುರಿತಂತೆ ಪ್ರತಿಕ್ರಿಯಿಸಿದ ಅವರು, ಉದ್ಯಮಿಯಾಗಿ ಸಿಎಂ ಪುತ್ರ ಭರತ ಬೊಮ್ಮಾಯಿ ಭಾಗಿಯಾಗಿದ್ದಾರೆ.
ಅದಕ್ಕೂ ಟೀಕೆ ಮಾಡೋದು ಅಂದರೆ ಹೇಗೆ.? ಕಾಂಗ್ರೆಸ್ ನವರಿಗೆ ಟೀಕೆ ಮಾಡೋದು ಬಿಟ್ಟರೆ ಬೇರೆ ಗೊತ್ತಿಲ್ಲ ಎಂದರು.
ಸಿದ್ದರಾಮಯ್ಯನವರು ಕನಸು ಕಾಣುತ್ತಿದ್ದಾರೆ. ಬಿಜೆಪಿ ಸರಕಾರ ಅಲ್ಲಾಡಿಸಲು ಯಾರಿಂದಲೂ ಆಗೋದಿಲ್ಲ. ನಾವು 118 ಜನ ಬಿಜೆಪಿ ಶಾಸಕರಿದ್ದೇವೆ. ಬೊಮ್ಮಾಯಿ ಅವರು ಸಿಎಂ ಆಗಿ ಅವಧಿ ಪೂರ್ಣಗೊಳಿಸಲಿದ್ದಾರೆ.
2023ರಲ್ಲೂ ಬಿಜೆಪಿ ಸರ್ಕಾರವೇ ಅಸ್ತಿತ್ವಕ್ಕೆ ಬರಲಿದೆ ಎಂದು ಹೇಳಿದರು. ಸಿದ್ದರಾಮಯ್ಯ ಭವಿಷ್ಯ ಹೇಳೋಕೆ ಶುರು ಮಾಡಿದ್ದಾರೆ.
ಅವರಿಗೆ ಭವಿಷ್ಯದಲ್ಲಿ ನಂಬಿಕೆ ಇಲ್ಲ. ಅದ್ಹೇಗೆ ಭವಿಷ್ಯ ಹೇಳಲು ಶುರು ಮಾಡಿದರೋ ಗೊತ್ತಿಲ್ಲ ಎಂದು ಹೇಳಿದರು.