ವಿಕೇಂಡ್ ಕರ್ಫ್ಯೂ; ಪ್ರಯಾಣಿಕರಿದ್ದರೆ ಮಾತ್ರ ಬಸ್ ಸಂಚಾರ

0
Spread the love

ವಿಜಯಸಾಕ್ಷಿ ಸುದ್ದಿ, ಹುಬ್ಬಳ್ಳಿ

Advertisement

ಶುಕ್ರವಾರ ಸಂಜೆಯಿಂದ ಸೋಮವಾರ ಬೆಳಿಗ್ಗೆ ವರೆಗೆ ವಾರಾಂತ್ಯ ಕರ್ಫ್ಯೂ ಅವಧಿಯಲ್ಲಿ ಸಾರ್ವಜನಿಕ ಬಸ್ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿರುತ್ತದೆ. ಶನಿವಾರ ಹಾಗೂ ರವಿವಾರದಂದು ಹುಬ್ಬಳ್ಳಿ ಗ್ರಾಮಾಂತರ ವಿಭಾಗದ ವ್ಯಾಪ್ತಿಯ ಹೊಸೂರು, ಗೋಕುಲ ರಸ್ತೆ ಬಸ್ ನಿಲ್ದಾಣ, ಕಲಘಟಗಿ,ತಡಸ, ಕುಂದಗೋಳ, ನವಲಗುಂದ, ಅಣ್ಣಿಗೇರಿ ಬಸ್ ನಿಲ್ದಾಣಗಳಿಂದ ಬಸ್ಸುಗಳ ಸಂಚಾರ ಎಂದಿನಂತೆ ಇರುತ್ತದೆ.

ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಬಸ್ಸುಗಳು ಕಾರ್ಯಾಚರಣೆ ಮಾಡಲಾಗುತ್ತದೆ. ಮುಂಗಡ ಬುಕ್ಕಿಂಗ್ ಪ್ರಯಾಣಿಕರ ಸಂಖ್ಯೆ ಆಧರಿಸಿ ದೂರ ಮಾರ್ಗದ ರಾತ್ರಿ ಸಾರಿಗೆ ಬಸ್ಸುಗಳನ್ನು ಕಾರ್ಯಾಚರಣೆ ಮಾಡಲಾಗುತ್ತದೆ. ಸೋಮವಾರ ಬೆಳಿಗ್ಗೆ 6 ರಿಂದ ಎಂದಿನಂತೆ ಎಲ್ಲಾ ಮಾರ್ಗಗಳಲ್ಲಿ ಬಸ್ಸುಗಳು ಸಂಚರಿಸಲಿವೆ ಎಂದು ಹುಬ್ಬಳ್ಳಿ ವಾಕರಸಾ ಸಂಸ್ಥೆ ವಿಭಾಗೀಯ ನಿಯಂತ್ರಣಾಧಿಕಾರಿ ಎಚ್. ರಾಮನಗೌಡರ
ತಿಳಿಸಿದ್ದಾರೆ.

ಕಳೆದ ವಾರದ ಅವಧಿಯಲ್ಲಿ ದಿನ
ನಿತ್ಯ 240ರಿಂದ 250ಬಸ್ ಗಳು ಸಂಚರಿಸಿದ್ದವು. ಆದರೆ ವಾರಾಂತ್ಯ ಕರ್ಫ್ಯೂ ಸಮಯದಲ್ಲಿ ಜನರ ಓಡಾಟ ಬಹಳಷ್ಟು ಕ್ಷೀಣಿಸಿತ್ತು. ಹೀಗಾಗಿ ಕೇವಲ 55 ಬಸ್ಸುಗಳು ಮಾತ್ರ ಸಂಚರಿಸಿದ್ದವು. ಈ ಹಿನ್ನೆಲೆಯಲ್ಲಿ ಪ್ರಯಾಣಿಕರು ಇರುವಂತ ಮಾರ್ಗಗಳಲ್ಲಿ ಬಸ್ ಗಳನ್ನು ಕಾರ್ಯಾಚರಣೆ ಮಾಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.


Spread the love

LEAVE A REPLY

Please enter your comment!
Please enter your name here