ವಿಜಯಸಾಕ್ಷಿ ಸುದ್ದಿ, ಮೈಸೂರು
ಕರ್ನಾಟಕ ರಾಜ್ಯ ಮುಕ್ತ ವಿವಿಯ ಸಹಾಯಕ ಕುಲಸಚಿವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಚಾಮುಂಡಿಪುರಂ ನಿವಾಸಿ ಮಂಜು ಪ್ರಸಾದ್(55) ಡೆತ್ ನೋಟ್ ಬರೆದಿಟ್ಟು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬುಧವಾರ ಮಧ್ಯಾಹ್ನ 12ಗಂಟೆಯ ಸಮಯದಲ್ಲಿ ಮನೆಯಲ್ಲಿ ಹೆಂಡತಿ, ಮಕ್ಕಳು ಇಲ್ಲದ ಸಂದರ್ಭದಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಡೆತ್ ನೋಟ್ ನಲ್ಲಿ ರಿಯಾಜ್ ಮತ್ತು ಜಾವಿದ್ ಎಂಬುವರಿಂದ ನಾನು ಜಯಲಕ್ಷ್ಮೀಪುರಂ ನಿವೇಶನ ಖರೀದಿಸಿದ್ದೆ. ಅದನ್ನು ನಾನು ಬೇರೆಯವರಿಗೆ ಮಾರಾಟ ಮಾಡಿದ್ದಾಗ, ಅವರಿಬ್ಬರು ನನಗೆ ನೀಡಿರುವ ದಾಖಲೆಗಳು ಸುಳ್ಳು ಎಂಬುವುದು ತಿಳಿದು ಬಂದಿದೆ. ಅಲ್ಲದೇ, ಈ ಸಂಬಂಧ ದೂರು ಕೂಡ ದಾಖಲಾಗಿದೆ. ಹಾಗಾಗಿ, ಈ ಸಾವಿಗೆ ರಿಯಾಜ್ ಮತ್ತು ಜಾವಿದ್ ಅವರೇ ಕಾರಣ ಎಂದು ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ಕುರಿತು ನಗರದ ಕೆ.ಆರ್.ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.