ವಿಜಯೇಂದ್ರ ದೇವಸ್ಥಾನ ಭೇಟಿ ಪ್ರಕರಣ; ವರದಿ ಕೇಳಿದ ಹೈ ಕೋರ್ಟ್‌

0
Spread the love

ವಿಜಯಸಾಕ್ಷಿ ಸುದ್ದಿ, ಬೆಂಗಳೂರು

Advertisement

ರಾಜ್ಯದಲ್ಲಿ ಲಾಕ್ ಡೌನ್ ಜಾರಿಯಲ್ಲಿದ್ದ ಸಂದರ್ಭದಲ್ಲಿ ಸಿಎಂ ಪುತ್ರ ಬಿ.ವೈ. ವಿಜಯೇಂದ್ರ, ಮೈಸೂರು ಜಿಲ್ಲೆಯ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಆರೋಪದ ಕುರಿತು ಹೈಕೋರ್ಟ್, ರಾಜ್ಯ ಸರ್ಕಾರದಿಂದ ವರದಿ ಕೇಳಿದೆ.

ಈ ಕುರಿತು ಮೈಸೂರು ಜಿಲ್ಲಾಧಿಕಾರಿಗಳ ಮೂಲಕ ಪ್ರಾಥಮಿಕ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಇಂದು ಆದೇಶ ನೀಡಿದೆ. ಏಪ್ರಿಲ್ ತಿಂಗಳಲ್ಲಿ ಕೋವಿಡ್ ಎರಡನೇ ಅಲೆ ಹೆಚ್ಚಾಗಿದ್ದರಿಂದಾಗಿ ಸರ್ಕಾರ, ಮೊದಲು ಕರ್ಫ್ಯೂ ಜಾರಿಗೊಳಿಸಿ, ಆ ನಂತರ ಲಾಕ್ ಡೌನ್ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ದೇವಸ್ಥಾನ ತೆರೆಯಲು ಅವಕಾಶ ನೀಡಿರಲಿಲ್ಲ. ಕೇವಲ ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ಅವಕಾಶವಿತ್ತು.

ಆದರೆ, ಈ ಸಂದರ್ಭದಲ್ಲಿ ವಿಜಯೇಂದ್ರ ಕಳೆದ ತಿಂಗಳು ತಮ್ಮ ಪತ್ನಿ ಜೊತೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದಿದ್ದಲ್ಲದೆ ಪೂಜೆ ನೆರವೇರಿಸಿದ್ದರು, ಕಪಿಲಾ ನದಿ ದಡದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದು, ಇದು ಎಷ್ಟು ಸರಿ, ಜನಸಾಮಾನ್ಯರಿಗೊಂದು ನಿಯಮ, ಜನಪ್ರತಿನಿಧಿಗಳಿಗೊಂದು ನಿಯಮವೇ ಎಂದು ಮಾಧ್ಯಮಗಳಲ್ಲಿ ವರದಿಯಾಗಿತ್ತು.

ಸದ್ಯ ಈ ಪ್ರಕರಣ ಕೈಗೆತ್ತಿಕೊಂಡ ಹೈಕೋರ್ಟ್, ಇಂದು ಘಟನೆಯ ಕುರಿತು ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸರ್ಕಾರಕ್ಕೆ ಸೂಚಿಸಿದೆ.


Spread the love

LEAVE A REPLY

Please enter your comment!
Please enter your name here