ವಿಜಯಸಾಕ್ಷಿ ವಿಶೇಷ, ಮೈಸೂರು
ಇಲ್ಲಿಯ ಕೆ.ಆರ್. ಆಸ್ಪತ್ರೆಯ ವೈದ್ಯರ ಮೇಲೆ ನಡೆದ ಹಲ್ಲೆಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್ ತೀವ್ರವಾಗಿ ಖಂಡಿಸಿದ್ದಾರೆ. ಯಾವುದೇ ಕಾರಣಕ್ಕೂ ವೈದ್ಯರ ಮೇಲೆ ಹಲ್ಲೆ ನಡೆಯಬಾರದು. ವೈದ್ಯರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ಅಲ್ಲದೇ, ಈಗಾಗಲೇ ಕೆ.ಆರ್. ಆಸ್ಪತ್ರೆಯಲ್ಲಿ ಬಂದೋಬಸ್ತ್ ಮಾಡುವಂತೆ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೇನೆ ಎಂದು ಹೇಳಿದ್ದಾರೆ.
ಅಲದೇ, ಕೆ.ಆರ್.ಆಸ್ಪತ್ರೆಗೆ ಅಡಿಷನಲ್ ಡೀನ್ ನೇಮಕ ಮಾಡುತ್ತೇವೆ. ಒಬ್ಬರೇ ಅಧಿಕಾರಿಗಳಿಗೆ ಕಾರ್ಯದ ಒತ್ತಡ ಹೆಚ್ಚಾಗುತ್ತಿದೆ. ಇದನ್ನು ತಪ್ಪಿಸಲು ಈ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಸಿಎಂ ಅವರ ಜೊತೆ ಮಾತನಾಡಿದ್ದೇನೆ. ವೈದ್ಯರಿಗೆ ಇನ್ನು ಮುಂದೆ ಈ ರೀತಿ ಆಗದಂತೆ ನೋಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಪ್ರತಿಯೊಂದು ಆಸ್ಪತ್ರೆಯಲ್ಲಿ ವೈದ್ಯರಿಗೆ ಇನ್ನು ಮುಂದೆ ಈ ರೀತಿ ಆಗದಂತೆ ಆಸ್ಪತ್ರೆಯಲ್ಲಿ ಬಂದೋಬಸ್ತ್ ಗೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.