ವಿಜಯಸಾಕ್ಷಿ ಸುದ್ದಿ, ಗದಗ
ಕೊರೊನಾ ವ್ಯಾಕ್ಸಿನ್ ಜಾಗೃತಿಗಾಗಿ ಸರ್ಕಾರ ಹಾಗೂ ಜಿಲ್ಲಾಡಳಿತ ಹಲವು ಕ್ರಮಗಳನ್ನು ಕೈಗೊಂಡರು ಜನ ಮಾತ್ರು ಲಸಿಕೆ ಪಡೆಯಲು ಮುಂದೆ ಬರುತ್ತಿಲ್ಲ. ಹೀಗಾಗಿ ಇಲ್ಲೊಂದು ಗ್ರಾಮದಲ್ಲಿ ಡಿಫರೆಂಟ್ ಆಗಿ ಜಾಗೃತಿ ಮೂಡಿಸಲಾಗುತ್ತಿದೆ.
ಕೊರೊನಾ ವ್ಯಾಕ್ಸಿನ್ ಹಾಕಿಸಿಕೊಳ್ಳದವರಿಗೆ ಈ ಗ್ರಾಮದಲ್ಲಿ ರೇಶನ್ ನೀಡದಿರಲು ತೀರ್ಮನಿಸಲಾಗಿದೆ. ಗ್ರಾಪಂ ಸಾಮಾನ್ಯ ಸಭೆಯಲ್ಲಿ ಜನರ ಒಳಿತಿಗಾಗಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಯಾರು ವ್ಯಾಕ್ಸಿನ್ ಹಾಕಿಸಿಕೊಳ್ಳುವದಿಲ್ಲವೋ ಅಂತಹ ಕುಟುಂಬಗಳಿಗೆ ಪಡಿತರ ನೀಡದಿರುವಂತೆ ಪಡಿತರ ಅಂಗಡಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಜಿಲ್ಲೆಯ ರೋಣ ತಾಲೂಕಿನ ಕೊತಬಾಳ ಗ್ರಾಪಂ ಸಾಮಾನ್ಯ ಸಭೆಯಲ್ಲಿ ಈ ಕುರಿತು ನಿರ್ಧಾರ ಕೈಗೊಳ್ಳಲಾಗಿದೆ. ಕೊರೊನಾ ಹಿನ್ನೆಲೆಯಲ್ಲಿ ಗ್ರಾಪಂನಲ್ಲಿ ಸಾಮಾನ್ಯ ಸಭೆ ನಡೆದಿತ್ತು. ಹೀಗಾಗಿ ಈ ಕುರಿತು ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಗಿದೆ.
ಗ್ರಾಮದಲ್ಲಿ ವ್ಯಾಕ್ಸಿನೇಶನ್ ಹಾಕಿಸಿಕೊಂಡವರಿಗೆ ಆರೋಗ್ಯ ಇಲಾಖೆ ವತಿಯಿಂದ ಪತ್ರವೊಂದನ್ನು ನೀಡಲಾಗುತ್ತದೆ. ಪಡಿತರ ಚೀಟಿದಾರರು ತಮ್ಮ ಪಡಿತರ ಕಾರ್ಡಿನೊಂದಿಗೆ ಆರೋಗ್ಯ ಇಲಾಖೆ ಪತ್ರ ತರಬೇಕು. ವ್ಯಾಕ್ಸಿನ್ ಹಾಕಿಸಿಕೊಂಡ ಬಗ್ಗೆ ಪತ್ರ ನೀಡಿದರೆ ಮಾತ್ರ ಅಂತವರಿಗೆ ರೆಶನ್ ಹಂಚಿಕೆ ಮಾಡಲಾಗುವುದು ಎಂದು ಸೂಚಿಸಲಾಗಿದೆ.
ಈ ಗ್ರಾಮಸ್ಥರು ಹಾಗೂ ಗ್ರಾಪಂ ಸದಸ್ಯರು ಒಟ್ಟಾಗಿ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಈ ಕಟ್ಟುನಿಟ್ಟಿನ ನಿರ್ಧಾರ ಕೈಗೊಂಡಿದೆ. ಜನರ ಆರೋಗ್ಯದ ದೃಷ್ಟಿಯಿಂದ ಈ ನಿರ್ಧಾರ ಉತ್ತಮವಾಗಿದೆ ಎಂದು ಕೂಡ ಗ್ರಾಮಸ್ಥರು ಮಾತನಾಡಿಕೊಳ್ಳುತ್ತಿದ್ದಾರೆ. ಇದರಿಂದಾಗಿ ಗ್ರಾಮಸ್ಥರು ವ್ಯಾಕ್ಸಿನ್ ಹಾಕಿಸಿಕೊಳ್ಳಲು ಮುಂದೆ ಬರುತ್ತಿದ್ದು, ಸದ್ಯ ಸುಮಾರು ನೂರಕ್ಕು ಹೆಚ್ಚು ಜನರು ಲಸಿಕೆ ಹಾಕಿಸಿಕೊಂಡಿದ್ದಾರೆ.